ಬ್ರೇಕಿಂಗ್ ನ್ಯೂಸ್
06-03-25 10:55 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಕರಾವಳಿಯ ಮಂಗಳೂರು- ಉಡುಪಿ ಅವಳಿ ನಗರಗಳ ನಡುವೆ ಮೆಟ್ರೋ ರೈಲು ಯೋಜನೆ ಕೈಗೊಳ್ಳಲು ರಾಜ್ಯ ಸರಕಾರ ಮಾಸ್ಟರ್ ಪ್ಲಾನ್ ಹಾಕಲು ಮುಂದಾಗಿದೆ. ಇದಕ್ಕಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರಕಾರ ಪತ್ರ ಬರೆದಿದ್ದು ಅಧ್ಯಯನ ನಡೆಸಿ ವರದಿ ನೀಡಲು ಸೂಚಿಸಿದೆ.
ಮಂಗಳೂರು- ಉಡುಪಿ- ಮಣಿಪಾಲ ಇಂಟರ್ ಸಿಟಿ ಮಧ್ಯೆ 64 ಕಿಮೀ ಉದ್ದದ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ಆರ್ಥಿಕ – ತಾಂತ್ರಿಕ ಕಾರ್ಯಸಾಧ್ಯತಾ ಅಧ್ಯಯನ ನಡೆಸಲು ರಾಜ್ಯ ಸರಕಾರ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ ಸಿಎಲ್)ಕ್ಕೆ ಸೂಚಿಸಿದೆ. ಈ ಕುರಿತು ಉಭಯ ಜಿಲ್ಲಾಧಿಕಾರಿಗಳಿಗೂ ಪತ್ರ ಬಂದಿದೆ ಎನ್ನುವುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಸದ್ಯಕ್ಕೆ ಮಂಗಳೂರು- ಉಡುಪಿ ಮಧ್ಯೆ ರಸ್ತೆ ಮಾರ್ಗವನ್ನೇ ಜನ ಅವಲಂಬಿಸಿದ್ದಾರೆ. ದಿನದಲ್ಲಿ ನೂರಾರು ಬಸ್ಸುಗಳು ಅವಳಿ ನಗರಗಳ ನಡುವೆ ಸಂಚರಿಸುತ್ತಿದ್ದು, 50 ಕಿಮೀ ಮಧ್ಯೆ ಸಾವಿರಾರು ಜನರು ಅಡ್ಡಾಡುತ್ತಾರೆ. ಈ ಬಗ್ಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮೋಹನದಾಸ್ ಹೆಗ್ಡೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರಿಗೆ ಪತ್ರ ಬರೆದಿದ್ದು, ಮಂಗಳೂರು- ಮಣಿಪಾಲ ಮಧ್ಯೆ ಪ್ರಮುಖ ನಗರ, ಅರೆ ನಗರ ಹಾಗೂ ಕೈಗಾರಿಕಾ ವಲಯಗಳನ್ನೊಳಗೊಂಡು ಮೆಟ್ರೋ ಮಾರ್ಗ ಅಭಿವೃದ್ಧಿಪಡಿಸಬಹುದು. ಇದರಿಂದ ಆರ್ಥಿಕ ಪ್ರಗತಿ, ನಗರಾಭಿವೃದ್ಧಿಯೊಂದಿಗೆ ಸಾರಿಗೆ ವ್ಯವಸ್ಥೆ ಸುಲಭವಾಗಬಹುದು ಎಂದು ತಿಳಿಸಿದ್ದಾರೆ.
ಈಗಿರುವ ಸಾರಿಗೆ ವ್ಯವಸ್ಥೆ ದಟ್ಟಣೆಯಿಂದ ಕೂಡಿದ್ದು, ಸಂಚಾರಕ್ಕೆ ಹೆಚ್ಚಿನ ಸಮಯ ತಗಲುತ್ತದೆ. ಜನಸಂಖ್ಯೆ ಹೆಚ್ಚಿರುವುದು ಮತ್ತು ಕರಾವಳಿ ನಗರಗಳು ಭಾರೀ ವೇಗದಲ್ಲಿ ಅಭಿವೃದ್ಧಿ ಆಗುತ್ತಿರುವುದರಿಂದ ಮೆಟ್ರೋ ರೈಲು ವ್ಯವಸ್ಥೆ ಸೂಕ್ತವಾಗಬಹುದು ಎನ್ನುವ ಅಭಿಪ್ರಾಯಗಳಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್. ಸರಕಾರವು ಉಡುಪಿ- ಮಂಗಳೂರು ಮಧ್ಯೆ ಮೆಟ್ರೋ ಆರಂಭಿಸುವ ಬಗ್ಗೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ. ಬಿಎಂಆರ್ ಸಿಎಲ್ ಅಧ್ಯಯನ ನಡೆಸಲಿದ್ದು ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
The proposed Mangaluru-Udupi-Manipal Metro rail project connecting key urban areas between the two cities has advanced as the Urban Development Department initiated an assessment of its feasibility. The department directed an examination of the metro rail project's viability to analyse the expected cost and revenue of the project.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm