ವಿದೇಶಿ ಕರೆನ್ಸಿ ಸಹಿತ ದುಬೈಗೆ ತೆರಳುತ್ತಿದ್ದ ಯುವಕ ಸೆರೆ 

17-12-20 09:18 pm       Mangaluru Correspondent   ಕರಾವಳಿ

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ. 

ಮಂಗಳೂರು, ಡಿ.17: ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ. 

ಆರೋಪಿ, ಕೇರಳದ ಚಿತ್ತಾರಿ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈತ ಗುರುವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ಸಂಜೆ 4:30ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದು, ತಪಾಸಣೆ ವೇಳೆ ಯೂರೊ ಹಾಗು ಯುಎಇ ದಿರ್ಹಾಮ್ ಪತ್ತೆಯಾಗಿದೆ. ಧರಿಸಿದ್ದ ಒಳ ಉಡುಪಿನ ಒಳಗಡೆ ಇಟ್ಟು ಸಾಗಾಟ ಮಾಡುತ್ತಿದ್ದ. 

ಸಿಐಎಸ್‌ಎಫ್ ಅಧಿಕಾರಿ ದೇವೇಂದರ್ ಸಿಂಗ್ ತಪಾಸಣೆ ನಡೆಸಿ ಅಕ್ರಮ ಸಾಗಾಟದ ವಿದೇಶಿ ಕರೆನ್ಸಿ ಪತ್ತೆ ಮಾಡಿದ್ದಾರೆ. ಆರೋಪಿ ಸಹಿತ ಸೊತ್ತನ್ನು ಮುಂದಿನ ತನಿಖೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

Man held for carrying illegal foreign currency at Mangalore International Airport. It is said he was carrying currencies of UAE and Euro worth 4,35,200 Rs.