ಬ್ರೇಕಿಂಗ್ ನ್ಯೂಸ್
15-03-25 01:47 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಕನ್ನಡ, ತುಳು ಭಾಷಾ ಸಾಹಿತ್ಯ ಲೋಕದ ಹಿರಿಯ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ. ವಾಮನ ನಂದಾವರ(81) ನಿಧನರಾಗಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.
ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಮೂಲದ ಇವರು ಕನ್ನಡ ಹಾಗೂ ತುಳು ಭಾಷಾ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಒಂದು ಬಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬಡ ಕುಟುಂಬದಲ್ಲಿ ಜನಿಸಿದ್ದ ವಾಮನ ನಂದಾವರ ಅವರು ಮುದುಂಗಾರು ಕಟ್ಟೆ ಸರ್ಕಾರಿ ಶಾಲೆ, ಪಾಣೆಮಂಗಳೂರಿನ ಎಸ್.ವಿ.ಎಸ್ ಶಾಲೆ ಹಾಗೂ ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ, ಕುರ್ನಾಡು ಬೋರ್ಡ್ ಹೈಸ್ಕೂಲು, ಕೋಟೆಕಾರಿನ ಆನಂದಾಶ್ರಮ ಪ್ರೌಢಶಾಲೆಗಳಲ್ಲಿ ಪ್ರೌಢಶಿಕ್ಷಣ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ, ಮಂಗಳೂರು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ ಪಡೆದಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎ (ಕನ್ನಡ), ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಇಡಿ ಪದವಿ ಪಡೆದಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ. ಬಿ.ಎ.ವಿವೇಕ ರೈ ಮಾರ್ಗದರ್ಶನದಲ್ಲಿ ರಚಿಸಿದ್ದ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪಡೆದಿದ್ದರು. ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಆರಂಭಿಸಿದ್ದ ಅವರು, ಮಂಗಳೂರಿನ ಸೇಂಟ್ ಆನ್ಸ್ ಪ್ರೌಢಶಾಲೆಯಲ್ಲಿ ಸಹಾಯಕ ಅಧ್ಯಾಪಕರಾಗಿ, ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ತುಳು, ಕನ್ನಡ ಭಾಷೆಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆಯಲ್ಲಿ ಹಾಗೂ ತುಳು ಜಾನಪದ ಪತ್ರಿಕೆ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು. ಬಂಟ್ವಾಳ ತಾಲ್ಲೂಕಿನ 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Senior Scholar Dr Vamana Nandavar (81), Prominent Figure in Tulu and Kannada Literature, Passes Away in Mangalore.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm