ಬ್ರೇಕಿಂಗ್ ನ್ಯೂಸ್
15-03-25 08:32 pm Mangalore Correspondent ಕರಾವಳಿ
ಮಂಗಳೂರು, ಮಾ.15 : 2015ರಲ್ಲಿ ಹಿಂದು ಯುವತಿಯ ಜೊತೆಗಿದ್ದ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಕಾರಿನಿಂದೆಳೆದು ಹಲ್ಲೆಗೈದಿದ್ದಲ್ಲದೆ, ಕಂಬಕ್ಕೆ ಕಟ್ಟಿ ಅರೆ ಬೆತ್ತಲೆಗೊಳಿಸಿ ವಿಡಿಯೋ ಮಾಡಿದ್ದ ಪ್ರಕರಣದಲ್ಲಿ 19 ಜನ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದಾಗ ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದು ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. 2015ರ ಆಗಸ್ಟ್ 28ರಂದು ಘಟನೆ ನಡೆದಿತ್ತು.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಮಯ ಸಹೋದ್ಯೋಗಿಯಾಗಿದ್ದ ಯುವತಿ ಎರಡು ಸಾವಿರ ಹಣ ಬೇಕೆಂದು ಕೇಳಿದ್ದಕ್ಕೆ ಶಾಕೀರ್ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ತೆರಳಿ ಹಣ ಕೊಡುತ್ತಿದ್ದಾಗಲೇ ಅಡ್ಡಗಟ್ಟಿದ್ದ ನಾಲ್ಕು ಬೈಕಿನಲ್ಲಿ ಬಂದಿದ್ದ ಯುವಕರು ಕಾರಿಗೆ ಅಡ್ಡಲಾಗಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಕಾರಿನಿಂದ ಎಳೆದು ಹಾಕಿ 10ರಿಂದ 12 ಜನ ಆರೋಪಿಗಳು ಸೇರಿ ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಆನಂತರ ಆತನ ಬಳಿಯಿದ್ದ ಎಟಿಎಂ ಕಾರ್ಡ್, ಎರಡು ಸಾವಿರ ನಗದು, ಮೊಬೈಲ್ ಕಿತ್ತುಕೊಂಡು ಹೋಗಿರುವುದಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು 19 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ 78 ದಾಖಲೆ, 33 ಸಾಕ್ಷಿಗಳನ್ನು ಹಾಜರುಪಡಿಸಿದರೂ ಪೊಲೀಸರಿಗೆ ಆರೋಪ ಸಾಬೀತು ಪಡಿಸಲು ಸಾಧ್ಯವಾಗದೇ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ 19 ಜನ ಆರೋಪಿಗಳನ್ನು ಖುಲಾಸೆಗೊಳಿಸಿ ಮಾ.15ರಂದು ತೀರ್ಪು ನೀಡಿದ್ದಾರೆ. ಆರೋಪಿಗಳ ಪರವಾಗಿ ವಕೀಲರಾದ ಬಿ.ಅರುಣ ಬಂಗೇರ, ಮೋಹನರಾಜ್ ಕೆ.ಆರ್, ಆಶಾ ನಾಯ್ಕ್, ಸುನೀಲ್ ಮತ್ತು ರಿಹಾನ ಪರ್ವೀನ್ ವಾದಿಸಿದ್ದರು.
Mangalore youth stripped, assaulted in full public view by moral police, Court Acquits all 19 hindu Activists. A group of youths, many reportedly affiliated to Bajrang Dal, allegedly stripped and attacked a Muslim youth in public in 2015 in Mangalore. The victim — identified as Shakir, an employee of Easyday Supermarket — was reportedly targeted as he was with a Hindu girl, his colleague. Shakir claimed he was merely giving the girl a ride in his car on her request, when he was attacked.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm