ಬ್ರೇಕಿಂಗ್ ನ್ಯೂಸ್
16-03-25 10:10 pm Udupi Correspondent ಕರಾವಳಿ
ಉಡುಪಿ, ಮಾ.16 : ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸಂಗೀತ ಸೇವೆ ನೀಡಿದ್ದಾರೆ.
ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ದಂಪತಿ ಕುಟುಂಬಸ್ಥರು, ಕೃಷ್ಣ ದೇವರ ಗರ್ಭಗುಡಿಯಲ್ಲಿ ನಡೆಯುವ ಮಹಾಪೂಜೆ ಮತ್ತು ಶಯನ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಿವಶ್ರೀ ಮತ್ತು ತೇಜಸ್ವಿ ಕೃಷ್ಣ ದೇವರ ಮುಂದೆ ಸಂಗೀತ ಸೇವೆಯನ್ನು ನೀಡಿದರು.


'ಜಗದೋದ್ಧಾರನಾ ಆಡಿಸಿದಳು ಯಶೋಧೆ..' ಮತ್ತು 'ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ' ಹಾಡನ್ನು ಹಾಡಿದರು. ಪರ್ಯಾಯ ಪುತ್ತಿಗೆ ಮಠ ಮತ್ತು ಉಡುಪಿ ಶ್ರೀಕೃಷ್ಣ ಮಠದ ಸಂಗೀತಗಾರ ನಾರಾಯಣ ಸರಳಾಯರು ಸಂಗೀತದಲ್ಲಿ ಸಾಥ್ ನೀಡಿದರು. ಪತಿ ಸಂಸದ ತೇಜಸ್ವಿ ಸೂರ್ಯ ವೇದಘೋಷ ಮಾಡಿದರು.
ಕಾರು ಬಿಟ್ಟು ಬಸ್‍ನಲ್ಲಿ ಸಂಚಾರ
ಸಂಸದ ತೇಜಸ್ವಿ ಸೂರ್ಯ ದಂಪತಿ ತಮ್ಮ ಸಂಚಾರಕ್ಕೆ ಕಾರನ್ನು ಬದಿಗಿಟ್ಟು ಬಸ್‍ನಲ್ಲಿ ಸಂಚರಿಸಿ ಗಮನ ಸೆಳೆದಿದ್ದಾರೆ. ಮಲೆನಾಡಿನ ಥಳುಕು ಬಳುಕಿನ ರಸ್ತೆಗಳಲ್ಲಿ ಮಲೆನಾಡಿನ ಸೌಂದರ್ಯವನ್ನು ಸವಿಯಲೋ ಎಂಬಂತೆ, ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಸಂಚಾರಕ್ಕೆ ಸಾರಿಗೆ ಬಸ್ಸನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳಸ, ಹೊರನಾಡಿಗೂ ತೆರಳಿ ದೇವರ ದರ್ಶನ ಪಡೆದರು. ಖಾಸಗಿ ಬಸ್‍ನಲ್ಲಿ ಪತ್ನಿ ಜೊತೆ ಸಂಚರಿಸಿದ ತೇಜಸ್ವಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಮಾಡಿಸಿ ದರ್ಶನ ಪಡೆದು ತೆರಳಿದ್ದರು
Bengaluru South MP Tejasvi Surya, accompanied by his wife Shivashree and family, visited the Udupi Sri Krishna Temple on Sunday to seek divine blessings. The couple was welcomed by temple authorities upon arrival, following which they received blessings from the presiding seer of the Paryaya Peetha. Surya actively participated in the temple’s annual chariot festival, joining devotees in pulling the Brahma Ratha, while Shivashree led devotional singing during the cradle puja.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm