ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am