ಬ್ರೇಕಿಂಗ್ ನ್ಯೂಸ್
18-03-25 08:53 pm Mangalore Correspondent ಕರಾವಳಿ
ಮಂಗಳೂರು, ಮಾ.18 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.
ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.
ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮಾ.18ರ ಮಂಗಳವಾರ ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ.
Forest Department Approves Electricity Access for 15 Malekudiya Tribal Families in Belthangady.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am