ಬ್ರೇಕಿಂಗ್ ನ್ಯೂಸ್
19-03-25 10:13 pm Udupi Correspondent ಕರಾವಳಿ
ಉಡುಪಿ, ಮಾ.19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಕಾರ್ಮಿಕ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ಸಂಬಂಧಿಸಿ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೊಬ್ಬರು ಬಂದರಿನಲ್ಲಿ ಬೋಟ್ ನಿಂದ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯರಾದ ಲಕ್ಷ್ಮೀ ಬಾಯಿ ಮತ್ತಿತರರು ಆಕೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲ್ಲೆಗೊಳಗಾದ ಮಹಿಳೆ ಮಾ.18ರಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿರುವ ಉಳಿದ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ನಡೆಸಿದ್ದು ನಂತರ ಸ್ಥಳೀಯರು ಕಲೆಯೊಂದಿಗೆ ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಘಟನೆ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ತಿಳಿಸಿದ್ದಾರೆ.
ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ; ಸಿಎಂ
ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ, ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.
ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,
ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Udupi Malpe Port Assault, Woman Tied to Pole Over Alleged Theft; Three Arrested, CM Siddaramaiah Initiates Thorough Investigation. Malpe police have arrested Lakshmibai, Sunder, Shilpa, and another individual in connection with the brutal assault on a woman at Malpe port, following allegations of fish theft. Providing details about the incident and legal actions taken, Udupi district police superintendent Dr Arun K stated, "Lakshmibai, Sunder, Shilpa, and another individual have been arrested by Malpe police for assaulting the woman.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm