ಬ್ರೇಕಿಂಗ್ ನ್ಯೂಸ್
26-03-25 04:23 pm Mangalore Correspondent ಕರಾವಳಿ
ಮಂಗಳೂರು, ಮಾ.26 : ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲೆ, ಮಂಗಳೂರು ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಮಾ.29ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನ ತಾಲೂಕು ಮಿನಿವಿಧಾನ ಸೌಧ, ಮಂಗಳೂರು ಇಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆಯನ್ನು ಕರೆಯಲಾಗಿದೆ.
ಜುಲೈ 1, 2022 ರಿಂದ ಜು.31 2024ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದಲ್ಲಿ ರಾಜ್ಯಾದ್ಯಂತ 26,743 ನಿವೃತ್ತರಿಗೆ 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಉಪಲಬ್ದಗಳನ್ನು ಪಾವತಿಸುವ ಸಂದರ್ಭದಲ್ಲಿ
ಆರ್ಥಿಕ ನಷ್ಟವಾಗಿರುತ್ತದೆ ಎಂದು ಸರಕಾರಕ್ಕೆ ಒತ್ತಾಯಿಸಲು ಸಭೆಯನ್ನು ಕರೆಯಲಾಗಿದೆ. ದ.ಕ.ಜಿಲ್ಲೆಯ ಸುಮಾರು 600ಕ್ಕೂ ಮಿಕ್ಕಿ ನಿವೃತ್ತ ನೌಕರರು ಮತ್ತು ರಾಜ್ಯದ ಸುಮಾರು 20 ಸಾವಿರ ಮಂದಿ ಸದಸ್ಯರಿಗೆ ಸಮಸ್ಯೆಯಾಗಿದೆ.
ಈ ಸಭೆಗೆ ಸಂಘದ ರಾಜ್ಯ ಮಹಾಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಖಯ್ಯ ಮತ್ತು ರಾಜ್ಯ ತಂಡದ ಸದಸ್ಯರು, ಎಂಎಲ್ಸಿ ಐವನ್ ಡಿ ಸೋಜ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸರಕಾರಕ್ಕೆ ಇನ್ನೊಮ್ಮೆ ಆರ್ಥಿಕ ನಷ್ಟದ ಬಗ್ಗೆ ಮನವರಿಕೆ ಮಾಡಲು ಏ.3ರಂದು ಮೂರನೇ ಸಲ ಬೆಂಗಳೂರು ಚಲೋ ಕಾರ್ಯಕ್ರಮ ಹಾಗೂ ಏ.4 ರಂದು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತರ ಸಂಘದ ವತಿಯಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ರಾಜ್ಯ ಸಮ್ಮೇಳನದಲ್ಲಿ ಬೇಡಿಕೆ ಈಡೇರಿಸಲು ಸರಕಾರವನ್ನು ಒತ್ತಾಯಿಸುವ ಕುರಿತು ನಿರ್ಧಾರವನ್ನು ತಾಳಲಾಗುತ್ತದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ರಾಜ್ಯ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹಾಗೂ ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘ ದ.ಕ. ಮಂಗಳೂರು ಅಧ್ಯಕ್ಷ ಎನ್. ಸೀತಾರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In order to voice their concerns and demands, retired government employees from the Dakshina Kannada district are set to hold a crucial meeting on March 29. The gathering aims to address various issues faced by retirees in the region, including pension-related grievances, healthcare benefits, and other welfare measures.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm