ಬ್ರೇಕಿಂಗ್ ನ್ಯೂಸ್
28-03-25 07:38 pm Mangalore Correspondent ಕರಾವಳಿ
ಮಂಗಳೂರು, ಮಾ.28 : ಮಂಗಳೂರು ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ 29ರಂದು ನಡೆಯಲಿದ್ದು ಈ ಬಾರಿಯೂ ಕಳೆದ ವರ್ಷದ ರೀತಿಯಲ್ಲೇ ಗೌರವ ಡಾಕ್ಟರೇಟ್ ಪದವಿಗಳನ್ನು ಮೂವರು ಉದ್ಯಮಿಗಳಿಗೆ ನೀಡಲಾಗಿದೆ. ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ರೋಹನ್ ಕಾರ್ಪೋರೇಶನ್ ರಿಯಲ್ ಎಸ್ಟೇಟ್ ಮಾಲೀಕ ರೋಹನ್ ಮೊಂತೆರೋ ಹಾಗೂ ಮುಂಬೈ ಉದ್ಯಮಿ, ಹೇರಂಭ ಇಂಡಸ್ಟ್ರೀಸ್ ಮಾಲಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.
ಹದಿನೈದು ಸಾಧಕ ವ್ಯಕ್ತಿಗಳ ಹೆಸರುಗಳನ್ನು ಅಂತಿಮಗೊಳಿಸಿ
ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಸಮಾಜ ಸೇವಾ ಕ್ಷೇತ್ರದಿಂದಲೇ ಮೂವರು ಸಾಧಕರನ್ನು ಗೌರವ ಡಾಕ್ಟರೇಟ್ ಗೆ ರಾಜ್ಯಪಾಲರು ಆಯ್ಕೆಗೊಳಿಸಿದ್ದಾರೆ ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಈ ಬಾರಿ ಪದವಿ ಪಡೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೂ ಕುಲಾಧಿಪತಿಯವರೇ ಪದವಿ ಪತ್ರ ವಿತರಿಸಲಿದ್ದಾರೆ. ಹಾಗೆಯೇ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಕಲಿತ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಹೊರಬರಲಿದ್ದಾರೆ. ಕಳೆದ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ 11 ವಿದ್ಯಾರ್ಥಿಗಳು ಡಾಕ್ಟರೇಟ್ ಪಡೆದಿದ್ದು ಈ ಬಾರಿ ಕ್ಯಾಂಪಸ್ ನಲ್ಲಿ 84 ಅಂತರಾಷ್ಟ್ರೀಯ ವಿದ್ಯಾರ್ಥಿಗಳಿದ್ದರೂ ಕೇವಲ 3 ವಿದ್ಯಾರ್ಥಿಗಳು ಡಾಕ್ಟರೇಟ್ ಪಡೆಯುತ್ತಿದ್ದಾರೆ.
ವಿವಿ ಕ್ಯಾಂಪಸ್ ನಲ್ಲಿ ನಿರ್ಮಿಸಿರುವ ಅಂತಾರಾಷ್ಟ್ರೀಯ ಮಟ್ಟದ ಹಾಸ್ಟೆಲ್ ಬಗ್ಗೆ ಕೇಳಿದ ಪ್ರಶ್ನೆಗೆ, ಆ ಕಟ್ಟಡವನ್ನು ಯಾವುದೇ ಸಂಸ್ಥೆಯ ಉಪಯೋಗಕ್ಕೆ ಬೇಕಿದ್ದರೆ ಸರಕಾರ ಅನುಮತಿ ಕೊಟ್ಟರೆ ನೀಡಲು ತಯಾರಿದ್ದೇವೆ. ಸದ್ಯಕ್ಕೆ ವಿವಿಗಂತೂ ಬಳಸಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದ್ದೇವೆ. ಅದನ್ನು ಮತ್ತೆ ದುರಸ್ತಿಗೊಳಿಸುವುದಕ್ಕೂ ಸಾಧ್ಯವಿಲ್ಲದ ಸ್ಥಿತಿಯಿದೆ ಎಂದು ವಿವಿಯಿಂದ ಆಗಿರುವ ಪ್ರಮಾದವನ್ನು ಒಪ್ಪಿಕೊಂಡರು.
ಶನಿವಾರ ಕುಲಾಧಿಪತಿ ಥಾವರ್ ಚಂದ್ ಗೇಹಲೊಟ್ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ನಡೆಯಲಿದ್ದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಉಪಾಧ್ಯಕ್ಷ ಪ್ರೊ. ವಿ.ಎನ್. ರಾಜಶೇಖರನ್ ಪಿಳ್ಳೆ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪರೀಕ್ಷಾಂಗ ಕುಲಸಚಿವ ಪ್ರೊ. ದೇವೇಂದ್ರಪ್ಪ ಹೆಚ್. ಹಾಗೂ ಕುಲಸಚಿವ ಕೆ. ರಾಜು ಮೊಗವೀರ ಸೇರಿದಂತೆ ಪ್ರಮುಖರು ಉಪಸ್ಥಿತರಿರುವರು.
ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 64 (ಕಲಾ ನಿಕಾಯ-28, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-38, ವಾಣಿಜ್ಯ ನಿಕಾಯ - 11, ಶಿಕ್ಷಣ ನಿಕಾಯ - 03) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿಹೆಚ್.ಡಿ) ಪಡೆಯಲಿದ್ದಾರೆ. ಇವರಲ್ಲಿ 31 ಮಹಿಳೆಯರು ಮತ್ತು 33 ಪುರುಷರು ಹಾಗೂ 03 ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು.
54 ಚಿನ್ನದ ಪದಕ ಮತ್ತು 56 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 127 ರಾಂಕ್ಗಳಲ್ಲಿ ಪ್ರಥಮ ರ್ಯಾಂಕ್ ಪಡೆದ 67 (ಸ್ನಾತಕೋತ್ತರ ಪದವಿ- 49 ಮತ್ತು ಪದವಿ-18) ವಿದ್ಯಾರ್ಥಿಗಳಿಗೆ ರಾಂಕ್ ಪ್ರಮಾಣ ಪತ್ರವನ್ನು ನೀಡಲಾಗುವುದು. ಇದರಲ್ಲಿ ಕಲಾ ನಿಕಾಯದ-18, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ- 39, ವಾಣಿಜ್ಯ ನಿಕಾಯದ -08, ಶಿಕ್ಷಣ
Mangalore University marked a significant milestone, celebrating its 43rd anniversary with a grand ceremony attended by distinguished guests, faculty, and students. The event highlighted the university’s commitment to excellence in education and recognition of individuals who have made remarkable contributions in various fields.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm