Kundapura accident: ಬಳ್ಕೂರಿನಲ್ಲಿ ಸ್ಕೂಟರಿಗೆ ಕಾರು ಡಿಕ್ಕಿ ; ಸವಾರರಿಬ್ಬರು ಸ್ಥಳದಲ್ಲೇ ಸಾವು 

28-03-25 11:16 pm       Udupi Correspondent   ಕರಾವಳಿ

ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. 

ಕುಂದಾಪುರ, ಮಾ.28 : ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. 

ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್. ರಸ್ತೆಯಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Collision Between Car and Scooter in Balakrur; Both Riders Killed on the Spot.