ಬ್ರೇಕಿಂಗ್ ನ್ಯೂಸ್
30-03-25 03:07 pm Mangalore Correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ) ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿ ನಡೆಯುವುದರಿಂದ ಎಪ್ರಿಲ್ 1ರಿಂದ 30ರ ವರೆಗೆ ಸಂಚಾರ ನಿಲುಗಡೆಯಾಗಲಿದೆ.
ಹೀಗಾಗಿ ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಸೇತುವೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ನೇತ್ರಾವತಿ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ ಗಳಲ್ಲಿ ಬೇರೆ ಮಾರ್ಗದಲ್ಲಿ ವಾಹನ ಸಂಚಾರವನ್ನು ಮಾಡುವಂತೆ ಪೊಲೀಸ್ ಇಲಾಖೆಯಿಂದ ಕೋರಲಾಗಿದೆ.
ಬದಲಿ ಮಾರ್ಗಕ್ಕೆ ವ್ಯವಸ್ಥೆ
ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವಿ ಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು- ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು.
ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು - ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು.
ಬಿ.ಸಿ.ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದು ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
As part of ongoing infrastructure improvements, the Ullal Netravati Bridge will undergo essential repair work from April 1 to April 30. In light of this construction, local authorities are advising motorists to seek alternate routes to ensure smooth traffic flow and minimize delays.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm