ಬ್ರೇಕಿಂಗ್ ನ್ಯೂಸ್
01-04-25 07:12 pm Mangalore Correspondent ಕರಾವಳಿ
ಮಂಗಳೂರು, ಎ.1 : ಅಧಿಕಾರಕ್ಕೆ ಬರುವ ಮೊದಲು ತಿಂಗಳಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ದಿವಾಳಿಯಾಗಿದ್ದು 10 ಕೆಜಿ ಬಿಡಿ, 5 ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ಜೊತೆಗೆ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನೂ ಕೊಡದೇ ರೇಷನ್ ಅಂಗಡಿಗಳ ಬಾಗಿಲಿಗೆ ನೋ ಸ್ಟಾಕ್ ಬೋರ್ಡ್ ಹಾಕಿದೆ. ಆದರೆ ಆಹಾರ ಸಚಿವರು ಅಕ್ಕಿ ಕೊರತೆ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗಾದರೆ ರೇಷನ್ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಯಾಕೆ? ಅಕ್ಕಿ ಸಿಗದೇ ಜನರು ಯಾಕೆ ವಾಪಾಸ್ ಹೋಗುತ್ತಿದ್ದಾರೆ? ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಬಡವರಿಗೆ ಸಿಗಬೇಕಾಗಿದ್ದ ಅಕ್ಕಿ ಅಕ್ರಮವಾಗಿ ಯಾರದ್ದೋ ಪಾಲಾಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಆರಂಭವಾಗದ ಬಂದರು ಅಭಿವೃದ್ಧಿ ಕಾಮಗಾರಿ
ದಕ್ಷಿಣ ಕನ್ನಡ ಜಿಲ್ಲೆಯ ಬಂದರಿನಲ್ಲಿ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು ಮೀನುಗಾರರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಂದರಿನ ಮೂರನೇ ಹಂತದ ಅಭಿವೃದ್ಧಿಗೆ ₹ 49.50 ಕೋಟಿ ಮಂಜೂರಾಗಿತ್ತು. ಆದರೆ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ದೆಹಲಿಯ ಗ್ರೀನ್ ಟ್ರಿಬ್ಯುನಲ್ ರಾಜ್ಯಕ್ಕೆ ಮೂರು ಬಾರಿ ಛೀಮಾರಿ ಹಾಕಿದೆ. ಆದರೂ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ನೆಪ ಹೇಳುತ್ತಾ ಯೋಜನೆಯನ್ನೇ ಹಳ್ಳ ಹಿಡಿಸುತ್ತಿರುವುದು ಖಂಡನೀಯ ಎಂದು ಹೇಳಿದರು.
ಬಂದರುಗಳ ಲ್ಯಾಂಡ್ ರೆಂಟ್ ದರಗಳಲ್ಲಿ ತೀವ್ರ ಹೆಚ್ಚಳ
ರಾಜ್ಯದ ಬಂದರುಗಳ ಲ್ಯಾಂಡ್ ರೆಂಟ್ ದರಗಳ ಹೆಚ್ಚಳದಿಂದಾಗಿ ಅನೇಕ ಸಮಸ್ಯೆಗಳು ಉಂಟಾಗಿದೆ. ಸದ್ಯ ಇಲ್ಲಿ 10 ಚ.ಮೀ ಗೆ 680/- ರೂ. ವರೆಗೆ ಇದೆ. ಬಂದರುಗಳಲ್ಲಿನ ಲ್ಯಾಂಡ್ ಗಳನ್ನು ಲೀಸ್ ಗೆ ಕೊಡುವಂತಹ ಕ್ರಮ ಇದ್ದು, ಗ್ರೌಂಡ್ ರೆಂಟ್ ಹೆಚ್ಚಾದರೆ ಅಲ್ಲಿ ಹೊಸ ಪ್ರಾಜೆಕ್ಟ್ ಗೆ ಯಾರೂ ಸಹ ಮುಂದೆ ಬರುವುದಿಲ್ಲ. ಇದರಿಂದ ಮುಖ್ಯವಾಗಿ ಟೂರಿಸಂಗೆ ತೀವ್ರ ಹಿನ್ನಡೆಯಾಗಿದ್ದು ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಎಲ್ಲರನ್ನೂ ಭೇಟಿಯಾಗಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ.
20 ತಿಂಗಳಲ್ಲಿ ಮೂರನೇ ಬಾರಿ ಹಾಲಿನ ದರ ಏರಿಕೆ
ಕೇವಲ 20 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿನ ದರವನ್ನು ₹9 ಏರಿಕೆ ಮಾಡಿದ್ದು ಜನರ ಮೇಲೆ ಹೊರೆ ಹೊರಿಸಿದೆ. ಹೈನುಗಾರಿಕೆಯನ್ನೇ ನಂಬಿರುವ ರೈತರಿಗೆ ದರ ಏರಿಕೆಯ ಲಾಭ ಹೋದರೆ ಯಾರೂ ವಿರೋಧ ಮಾಡುವುದಿಲ್ಲ. ಆದರೆ ಪ್ರತೀ ಬಾರಿಯೂ ರೈತರ ಹೆಸರಿನಲ್ಲಿ ಹಾಲಿನ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದು ವಾಸ್ತವದಲ್ಲಿ ಹಾಲು ಉತ್ಪಾದಕರಿಗೆ ಸೇರಬೇಕಾಗಿದ್ದ 650 ಕೋಟಿಗೂ ಅಧಿಕ ಪ್ರೋತ್ಸಾಹ ಧನವನ್ನೇ ಇನ್ನೂ ಬಾಕಿ ಉಳಿಸಿಕೊಂಡಿದೆ. ರೈತರ ಹೆಸರಿನಲ್ಲಿ ಇವರು ನಮ್ಮನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಭಾವನೆ ಜನಸಾಮಾನ್ಯರಲ್ಲಿ ದಟ್ಟವಾಗುತ್ತಿದೆ ಎಂದು ಕಾಮತ್ ಹೇಳಿದರು.
ಜನಸಾಮಾನ್ಯರಿಗೆ ವಿದ್ಯುತ್ ದರ ಏರಿಕೆ ಶಾಕ್
ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹ ಬಳಕೆ ವಿದ್ಯುತ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿ ಜನರಿಗೆ ಶಾಕ್ ನೀಡಿದೆ. ಗೃಹ ಬಳಕೆ ವಿದ್ಯುತ್‌ನ ಪ್ರತಿ ಯೂನಿಟ್ ದರದಲ್ಲಿ 10 ಪೈಸೆ ಇಳಿಕೆ ಮಾಡಿದ್ದೇವೆ ಎನ್ನುವ ಇವರು, ಗ್ರಾಹಕರಿಗೆ ಮಂಜೂರಾದ ಪ್ರತಿ ಕೆ.ವಿಗೆ ₹25 ಏರಿಕೆ ಮಾಡಿದ್ದಾರೆ. ಒಂದು ಕಡೆ ಉಚಿತ ಕರೆಂಟ್ ಎನ್ನುತ್ತಾ, ಇನ್ನೊಂದು ಕಡೆ ಕರೆಂಟ್ ದರ ಹೆಚ್ಚಿಸುತ್ತಾ ಬಂದ ಕಾಂಗ್ರೆಸ್ ಸರ್ಕಾರದ ಮಹಾ ಮೋಸ ಇದೀಗ ಎಲ್ಲರಿಗೂ ಅರಿವಾಗಿದೆ ಎಂದರು.
Mangalore MLA Kamath voiced strong concerns over the alarming rise in prices of essential commodities and the lack of rice stock in ration shops across Karnataka. The situation has prompted widespread frustration among the citizens, leading to calls for immediate government intervention.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm