ಬ್ರೇಕಿಂಗ್ ನ್ಯೂಸ್
01-04-25 09:38 pm Mangalore Correspondent ಕರಾವಳಿ
ಮಂಗಳೂರು, ಎ.1 : ಗೋಸೇವಾ ಗತಿವಿಧಿ ಕರ್ನಾಟಕ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ರಾಧಾಸುರಭಿ ಗೋಮಂದಿರ ಪುದು ಮತ್ತು ವಿಶ್ವ ಹಿಂದು ಪರಿಷತ್ ಮತ್ತು ಪರಿವಾರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡ ನಂದಿ ರಥಯಾತ್ರೆ 95 ದಿಗನಳ ಕಾಲ ರಾಜ್ಯಾದ್ಯಂತ ಸಂಚರಿಸಿದ್ದು, ಎಪ್ರಿಲ್ 5ರಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ಸಮಾರೋಪಗೊಳ್ಳಲಿದೆ. ಆ ಪ್ರಯುಕ್ತ ಅಂದು ಸಂಜೆ 3.30ಕ್ಕೆ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದ ವರೆಗೆ ವಿವಿಧ ಗೋತಳಿಯ ಗೋವುಗಳು ಮತ್ತು ನಂದಿ ರಥಯಾತ್ರೆಯ ಮೆರವಣಿಗೆ ನಡೆಯಲಿದೆ.
ಕರಾವಳಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಶೋಭಾಯಾತ್ರೆ ಉದ್ಘಾಟಿಸುವರು. ವಿಶೇಷ ಆಕರ್ಷಣೆಯಾಗಿ ಜಿಲ್ಲೆಯ 108 ಕುಣಿತ ಭಜನಾ ತಂಡಗಳು ಭಾಗವಹಿಸಲಿವೆ. ಮಾತೆಯರಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಸ್ಯಾಕ್ಸೋಫೋನ್, ಚೆಂಡೆ ವಾದನ, ಆಕರ್ಷಕ ಟ್ಯಾಬ್ಲೋಗಳು, ಜಾನಪದ ಗೊಂಬೆಗಳು ಮೆರವಣಿಗೆಯಲ್ಲಿ ಸಾಗಿ ಬರಲಿವೆ. ಕದ್ರಿ ಮೈದಾನದಲ್ಲಿ ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರದ ಓಂಕಾರ ಜ್ಯೋತಿ ಆಶ್ರಮದ ಶ್ರೀ ಕಾಳೀತನಯ ಉಮಾಮಹೇಶ್ವರ ಆಚಾರ್ಯರಿಂದ ಗೋಭಕ್ತಿ ಗಾನಸುಧಾ ಕಾರ್ಯಕ್ರಮ ಇರಲಿದೆ.
ಮುಷಮುಕ್ತ ಗಾಳಿ, ಮಣ್ಣು, ಆಹಾರ, ಪ್ರಕೃತಿ, ಪರಿಸರ ಸಂರಕ್ಷಣೆ, ಪಂಚಗವ್ಯ ಚಿಕಿತ್ಸೆ, ರೋಗಮುಕ್ತ ಭಾರತ ಎನ್ನುವ ಉದಾತ್ತ ಉದ್ದೇಶ ಇಟ್ಟುಕೊಂಡು ದೇಸೀ ಗೋತಳಿ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ನಂದಿ ರಥಯಾತ್ರೆ ಮಾಡಿದ್ದೇವೆ. ರಾಧಾಸುರಭಿ ಮಂದಿರದ ಭಕ್ತಿಭೂಷಣದಾಸ್ ನೇತೃತ್ವದಲ್ಲಿ ನಂದಿ ರಥಯಾತ್ರೆ ನಡೆಸಲಾಗಿದ್ದು, ನಂದಿಪೂಜೆ, ಗೋಕಥೆ, ಮನೆ ಮನೆಯಲ್ಲಿ ಗೋವು, ದೇಸಿ ಗೋಮಾತೆಯ ಮಹಿಮೆ ಜನರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಜನರಿಂದ ಅತ್ಯುತ್ತಮ ಸ್ಪಂದನೆ ಸಿಕ್ಕಿದೆ. ಸಮಾರೋಪದಂದು ನೂರಾರು ಗೋವುಗಳನ್ನು ಪ್ರದರ್ಶನ ಮಾಡಲಿದ್ದೇವೆ ಎಂದು ಗೋಸೇವಾ ಗತಿವಿಧಿಯ ದಕ್ಷಿಣ ಪ್ರಾಂತ ಸಂಯೋಜಕ ಪ್ರವೀಣ್ ಸರಳಾಯ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಗೋವುಗಳಲ್ಲಿ ವಿಶೇಷವಾಗಿರುವ ಗಜಗಾತ್ರದ ವಿಶೇಷ ತಳಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ. ಅಪರೂಪದ ಮತ್ತು ವಿಶಿಷ್ಟ ಗೋವುಗಳಿಗೆ ಸ್ಪರ್ಧೆಯಲ್ಲಿ ಬಹುಮಾನವನ್ನೂ ನೀಡಲಾಗುವುದು. ಈಗಾಗಲೇ ಗೋವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಲು ರಾಷ್ಟ್ರಪತಿಗೆ ಮನವಿ ಕೊಟ್ಟಿದ್ದೇವೆ. ಈ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿಗಳನ್ನು ಕರೆಸುವ ಸಂಕಲ್ಪ ಮಾಡಿದ್ದೆವು. ಅವರಿಗೆ ಬರಲು ಸಾಧ್ಯವಾಗದ್ದರಿಂದ ಮುಂದಿನ ಬಾರಿ ಗೋಸೇವಾ ಗತಿವಿಧಿಯ ಇನ್ನೊಂದು ಕಾರ್ಯಕ್ರಮಕ್ಕೆ ಕರೆಸಲಿದ್ದೇವೆ. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿಸಿದರೆ ಕೊಲ್ಲುವ ಪರಂಪರೆ ನಿಲ್ಲಬಹುದು ಎಂದು ಹೇಳಿದರು.
ಸಂಜೆ 5.30ಕ್ಕೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದು ಗೋಸೇವಾ ಗತಿವಿಧಿಯ ಅಖಿಲ ಭಾರತೀಯ ಸಂಯೋಜಕ ಅಜಿತ್ ಪ್ರಸಾದ್ ಮಹಾಪಾತ್ರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮುಖ್ಯ ಅತಿಥಿಗಳಾಗಿರಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ನಂದಿರಥ ಯಾತ್ರೆ ಸಮಿತಿಯ ಅಧ್ಯಕ್ಷ ಗಿರಿಧರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಗದೀಶ ಶೇಣವ, ಭಕ್ತಿಭೂಷಣದಾಸ್ ಸ್ವಾಮೀಜಿ, ತಾರನಾಥ ಕೊಟ್ಟಾರಿ ಫರಂಗಿಪೇಟೆ, ವಿಎಚ್ ಪಿ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಉಪಸ್ಥಿತರಿದ್ದರು.
The vibrant 95-day Nandi Rath Yatra to be held in Mangaluru on April 5th.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm