Mangalore Accident, Padil: ಪಡೀಲ್ ; ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೇರಿ ನಿಂತ ಕಾರು ! 

09-04-25 10:57 pm       Mangalore Correspondent   ಕರಾವಳಿ

ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಮಂಗಳೂರು, ಎ.9 : ಅತಿ ವೇಗದಲ್ಲಿ ನುಗ್ಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು ಅಳಪೆ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್ ಮೇಲೇರಿ ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. 

ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮೂಲಕ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು. ಘಟನೆಯಿಂದ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿದೆ. ಬಳಿಕ ಡಿವೈಡರ್‌ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿ ಮೇಲಕ್ಕೆತ್ತಿ ಬದಿಗೆ ಸರಿಸಿದ್ದಾರೆ.

Mangalore Driver Loses Control, Car Comes to Rest on Divide at alpe in padil.