ಬ್ರೇಕಿಂಗ್ ನ್ಯೂಸ್
11-04-25 02:49 pm Mangalore Correspondent ಕರಾವಳಿ
ಮಂಗಳೂರು, ಎ.11 : ಮಂಗಳೂರು - ಪುತ್ತೂರು ಎಕ್ಸ್ ಪ್ರೆಸ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾಗಿದ್ದು ಎ.12ರಿಂದ ದಿನದಲ್ಲಿ ನಾಲ್ಕು ಬಾರಿ ಸಂಚರಿಸಲಿದೆ. ವಿಸ್ತರಣೆಗೊಂಡ ರೈಲನ್ನು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೇ ಸಚಿವಾಲಯದೊಂದಿಗೆ ನಿರಂತರ ಪ್ರಯತ್ನದ ಮೂಲಕ ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ರೈಲು ವೇಳಾಪಟ್ಟಿ ಹೀಗಿದೆ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ- ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಅದೇ ದಿನ ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ಅದೇ ದಿನ ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
Minister of State (MoS) for Railways V Somanna will flag off extension of services of Mangaluru Central-Kabaka Puttur passenger train to Subrahmanya Road at Mangaluru Central Railway Station on April 12, Dakshina Kannada MP Capt Brijesh Chowta said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm