ಬ್ರೇಕಿಂಗ್ ನ್ಯೂಸ್
13-04-25 01:27 pm Mangalore Correspondent ಕರಾವಳಿ
ಮಂಗಳೂರು, ಎ.13 : ಕರ್ನಾಟಕಕ್ಕೆ ಮತ್ತೆರಡು ವಂದೇ ಭಾರತ್ ಸ್ಲೀಪರ್ ರೈಲು ಶೀಘ್ರದಲ್ಲೇ ಬರಲಿದ್ದು, ಅದರಲ್ಲಿ ಒಂದನ್ನು ಮಂಗಳೂರಿಗೆ ಸಂಪರ್ಕಿಸಲಾಗುವುದು ಎಂದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು - ಮಂಗಳೂರು ಸೆಂಟ್ರಲ್ ಪ್ಯಾಸೆಂಜರ್ ರೈಲಿನ ಸುಬ್ರಹ್ಮಣ್ಯ ರೋಡ್ ನಿಲ್ದಾಣ ವರೆಗಿನ ವಿಸ್ತರಣೆಗೆ ಹಸಿರು ನಿಶಾನೆ ನೀಡಿ ಸಚಿವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ಮಂಗಳೂರು- ಬೆಂಗಳೂರು ಮಧ್ಯೆ ಸಂಪರ್ಕ ವ್ಯವಸ್ಥೆ ಇನ್ನಷ್ಟು ಉತ್ತಮಗೊಳ್ಳಬೇಕು. ಇದಕ್ಕಾಗಿ ರೈಲ್ವೇ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣವನ್ನು 19 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ಈಗಾಗಲೇ 85 ಶೇ. ಕಾಮಗಾರಿ ಪೂರ್ಣಗೊಂಡಿದೆ. ಆಗಸ್ಟ್ ವೇಳೆಗೆ ಸಂಪೂರ್ಣ ಕಾಮಗಾರಿ ಮುಕ್ತಾಯಗೊಳ್ಳಲಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ಮಾಸ್ಟರ್ ಪ್ಲಾನ್ ತಯಾರಾಗಿದ್ದು, ಟೆಂಡರ್ ಕರೆದು ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲಾಗುವುದು. ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆಯಡಿ 24 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಭಕ್ತರು ಹೆಚ್ಚು ಬರುವುದರಿಂದ ಅಲ್ಲಿ ವಿಕಲಚೇತನರಿಗೆ ಪೂರಕವಾಗಿ ಎಕ್ಸಲೇಟರ್ ವ್ಯವಸ್ಥೆ ಮಾಡಲಾಗುತ್ತಿದ್ದು ಸೆ.25ರೊಳಗೆ ಈ ಕಾಮಗಾರಿ ಮುಗಿಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ನಡುವಿನ ಅವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಕವಚ್ ಎನ್ನುವ ಹೊಸ ಯೋಜನೆ ರೂಪಿಸಿದ್ದು ದೇಶಾದ್ಯಂತ 10 ಸಾವಿರ ಕಿಮೀ ವ್ಯಾಪ್ತಿಯಲ್ಲಿ ಕವಚ್ ಯೋಜನೆ ಕಾರ್ಯಗತಗೊಳ್ಳುತ್ತಿದ್ದು, ಕರ್ನಾಟಕದಲ್ಲಿ 1800 ಕಿಮೀ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದೆ. ಸಕಲೇಶಪುರ- ಕುಕ್ಕೆ ನಡುವೆ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೇ ಹಾಗೂ ರಸ್ತೆ ಜೊತೆ ಜೊತೆಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ಜೊತೆಗೆ ಸಮಾಲೋಚನೆ ಮಾಡಿದ್ದೇವೆ. ಜಮ್ಮು ಕಾಶ್ಮೀರ ಮಾದರಿಯಲ್ಲಿ ಸುರಂಗ ಮಾರ್ಗ ಮಾಡುವ ಆಲೋಚನೆ ಇದೆ ಎಂದು ಹೇಳಿದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಹಳಿಯ ವಿದ್ಯುದೀಕರಣ ಸಂಪೂರ್ಣಗೊಂಡ ಬಳಿಕ ಇದನ್ನು ಮೆಮೋ ರೈಲು ಆಗಿ ಪರಿವರ್ತನೆಗೊಳಿಸಬೇಕು. ಮಂಗಳೂರು- ಬೆಂಗಳೂರು ನಡುವೆ ಹೆದ್ದಾರಿ ಇಲಾಖೆ ಜತೆ ಸಮನ್ವಯ ಮಾಡಿಕೊಂಡು ರೈಲು ಹಾಗೂ ರಸ್ತೆಯನ್ನು ಜತೆ ಜತೆಯಾಗಿ ಶಿರಾಡಿ ಘಾಟ್ ನಲ್ಲಿ ಅಭಿವೃದ್ಧಿ ಪಡಿಸುವ ಕೆಲಸ ಆಗಬೇಕು. ರೈಲ್ವೇ ಡಿಆರ್ ಎಂಗಳ ಸಭೆಯನ್ನು ಮೂರು ತಿಂಗಳಿಗೊಮ್ಮೆ ಸಮರ್ಪಕವಾಗಿ ನಡೆಸಲು ಜವಾಬ್ದಾರಿಯನ್ನು ಸಂಬಂಧಪಟ್ಟವರಿಗೆ ವಹಿಸಬೇಕು ಎಂದು ಸಚಿವರಿಗೆ ಬೇಡಿಕೆ ಸಲ್ಲಿಸಿದರು.
ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಸೇರಿಸಲು ನಿರ್ಧಾರ
ಇದೇ ವೇಳೆ, ಆಡಳಿತಾತ್ಮಕ ಅಭಿವೃದ್ಧಿಗಾಗಿ ಮಂಗಳೂರು ರೈಲ್ವೇ ವಲಯವನ್ನು ಯಾವುದಾದರೂ ಒಂದು ವಿಭಾಗದ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಈ ಕುರಿತ ಪ್ರಶ್ನೆಗೆ ಸಚಿವ ಸೋಮಣ್ಣ ಉತ್ತರಿಸಿದ್ದಾರೆ. ದಕ್ಷಿಣ, ನೈರುತ್ಯ ಹಾಗೂ ಕೊಂಕಣ ರೈಲ್ವೇ ಈ ಮೂರು ವಿಭಾಗಗಳನ್ನು ಮಂಗಳೂರು ರೈಲ್ವೇ ವಲಯ ಒಳಗೊಂಡಿದೆ. ಇದರಿಂದಾಗಿ ಆಡಳಿತಾತ್ಮಕ ಮತ್ತು ಅಭಿವೃದ್ಧಿಗೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ನಿವಾರಿಸಲು ಒಂದು ವಿಭಾಗಕ್ಕೆ ವಲಯವನ್ನು ಸೀಮಿತಗೊಳಿಸಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಸ್ಪೀಕರ್ ಯುಟಿ ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಸಂಜೀವ ಮಠಂದೂರು, ಪಾಲ್ಘಾಟ್ ವಿಭಾಗದ ಡಿಆರ್ ಎಂ. ಅರುಣ್ ಕುಮಾರ್ ಚತುರ್ವೇದಿ ಉಪಸ್ಥಿತರಿದ್ದರು.
Union Minister of State for Railways and Jal Shakti, V Somanna, announced on Saturday that Mangaluru will soon receive a Vande Bharat sleeper train service. Speaking at the Mangaluru Central Railway Station after flagging off the extended Mangaluru Central–Kabaka Puttur passenger train to Subrahmanya Road, the minister said the new sleeper coaches are expected to be introduced within the next two months.
14-04-25 09:48 pm
HK News Desk
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
Hubballi rape, Encounter, Crime; ಐದು ವರ್ಷದ ಬಾ...
13-04-25 10:58 pm
14-04-25 11:25 pm
HK News Desk
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
Indian Mujahideen, Yasin Bhatkal: ಹೈದರಾಬಾದ್ ಬ...
10-04-25 09:10 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
12-04-25 10:52 pm
Mangalore Correspondent
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am