ಬ್ರೇಕಿಂಗ್ ನ್ಯೂಸ್
18-04-25 12:54 pm Mangalore Correspondent ಕರಾವಳಿ
ಮಂಗಳೂರು, ಎ.18: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಆಯೋಜಿಸಿದ ಹಿನ್ನೆಲೆಯಲ್ಲಿ ಮಂಗಳೂರು ನಗರದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಪೊಲೀಸ್ ಸರ್ಪಗಾವಲಿನ ಮಧ್ಯೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಡ್ಯಾರ್ ಷಾ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು ಭಾರೀ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.
ಬಂದೋಬಸ್ತಿಗೆ ಎರಡು ಸಾವಿರಕ್ಕೂ ಅಧಿಕ ಪೊಲೀಸರನ್ನು ಮಂಗಳೂರು ನಗರದ ಅಲ್ಲಲ್ಲಿ ನಿಯೋಜನೆ ಮಾಡಲಾಗಿದೆ. ಐವರು ಎಸ್ಪಿಗಳು ಮತ್ತು ಅಡಿಷನಲ್ ಎಸ್ಪಿಗಳು, 20 ಡಿವೈಎಸ್ ಪಿ, ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ನೇತೃತ್ವ ನೀಡಲಿದ್ದಾರೆ. ಇದಲ್ಲದೆ, 20 ಕೆಎಸ್ ಆರ್ ಪಿ ತುಕಡಿ, 20 ಸಶಸ್ತ್ರ ಪೊಲೀಸ್ ಪಡೆಯನ್ನೂ ನಿಯೋಜನೆ ಮಾಡಲಾಗಿದೆ.
ಪ್ರತಿಭಟನೆ ನಡೆಯುವ ಸ್ಥಳ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಭದ್ರತೆ ಕಲ್ಪಿಸಲಾಗಿದೆ. ಮುಸ್ಲಿಂ ಬಾಹುಳ್ಯ ಪ್ರದೇಶಗಳು, ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರುವ ಸದ್ಯ ಉಡುಪಿ, ಕೊಡಗು, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್, ಡಿವೈಎಸ್ಪಿ ದರ್ಜೆಯ ಪೊಲೀಸ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿದೆ.
ಪ್ರತಿಭಟನಾ ಸಭೆ ಮತ್ತು ಆವರಣದಲ್ಲಿ ಇಡೀ ದಿನದ ಪ್ರತಿ ಚಲನವಲನಗಳನ್ನ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡುತ್ತೇವೆ. ಪ್ರತಿಭಟನಾ ಸಭೆ ಆಯೋಜಕರಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ. ಈ ಬಗ್ಗೆ ಆಯೋಜಕರಿಂದ ಮುಚ್ಚಳಿಕೆ ಬರೆಸಿ ನಿಗದಿತ ಮೊತ್ತದ ಬಾಂಡ್ ಪಡೆಯಲಾಗಿದೆ. ಅಲ್ಲದೆ, ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧ ಮಾಡಿಲ್ಲ. ಮುನ್ನಚ್ಚೆರಿಕಾ ಕ್ರಮವಾಗಿ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಮಂಗಳೂರು ಕೋಮು ಸೂಕ್ಷ್ಮ ಜಿಲ್ಲೆಯಾಗಿರುವುದರಿಂದ ಮತ್ತು ಕಾಂಗ್ರೆಸ್ ಆಡಳಿತ ಇರುವುದರಿಂದ ಯಾವುದೇ ಕಾರಣಕ್ಕು ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಏನು ಬೇಕಾದರೂ ವ್ಯವಸ್ಥೆ ಮಾಡಿಕೊಳ್ಳಿ ಎಂದು ಪೊಲೀಸ್ ಕಮಿಷನರ್ ಮತ್ತು ಎಸ್ಪಿಗಳಿಗೆ ರಾಜ್ಯ ಸರ್ಕಾರದಿಂದ ಸೂಚನೆ ನೀಡಲಾಗಿದೆ. 2019ರಲ್ಲಿ ಸಿಎಎ ಕಾಯ್ದೆ ವಿರುದ್ಧ ಮುಸ್ಲಿಮರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಿಂಸಾಚಾರ ನಡೆದು ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು. ಹೀಗಾಗಿ ಈ ಬಾರಿ ವಿಶೇಷ ನಿಗಾ ಇಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
In response to the Waqf protest meeting scheduled to take place in a communally sensitive area of Mangalore in adyar, local authorities have ramped up security measures, deploying over 2,000 police personnel to maintain peace and order. The protest, organized by the Waqf Board, has raised concerns among residents and local officials due to the area's history of communal tensions. Anticipating potential unrest, police have cordoned off the meeting venue and implemented restrictions on movement in the vicinity.
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm