ಬ್ರೇಕಿಂಗ್ ನ್ಯೂಸ್
30-04-25 04:06 pm Mangalore Correspondent ಕರಾವಳಿ
ಮಂಗಳೂರು, ಎ.30 : ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ.
ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ ಶಕ್ತಿಗಳು ದ್ವೇಷ ಹರಡುವ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಪೊಲೀಸರು ಅದಕ್ಕೆ ಅವಕಾಶ ಕೊಡಬಾರದು.
ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆನ್ನುವುದು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವಾಗಿದೆ. ದಕ್ಷಿಣ ಕನ್ನಡದ ಜನ ಈ ಹುನ್ನಾರಗಳನ್ನು ಅರಿಯಬೇಕು. ಪ್ರಜ್ಞಾವಂತರ ಜಿಲ್ಲೆ ಎಂದೇ ಹೆಸರಾದ ದಕ್ಷಿಣ ಕನ್ನಡಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಕಾನೂನು ಕೈಗೆತ್ತಿಕೊಳ್ಳುವ, ಸಮಾಜದ ಸ್ವಾಸ್ಥ್ಯ ಕೆಡಿಸುವ, ಸಾಮರಸ್ಯಕ್ಕೆ ಕೊಳ್ಳಿ ಇಡುವ ಯಾವುದೇ ದುಷ್ಟ ಪ್ರಯತ್ನಕ್ಕೆ ನಮ್ಮ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಈ ವಿಚಾರದಲ್ಲಿ ನಮ್ಮದು ಶೂನ್ಯ ಸಹಿಷ್ಣುತೆ ಎಂಬ ಮಾತನ್ನು ಸಮಾಜ ಘಾತಕರಿಗೆ ಎಚ್ಚರಿಕೆ ರೂಪದಲ್ಲಿ ಹೇಳಲು ಬಯಸುತ್ತೇನೆ.
ದಯೆಗಿಂತ ಮಿಗಿಲಾದ ಧರ್ಮವಿಲ್ಲ ಎಂಬ ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಶಯಕ್ಕೆ ಧಕ್ಕೆ ಬರಬಾರದು. ಸಮಾಜದ ಶಾಂತಿ ಕದಡಬಾರದು. ಇದು ನನ್ನ ಮನವಿ ಎಂದು ಕುಡುಪು ಗುಂಪು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has strongly condemned the barbaric murder of a youth who was bludgeoned with a stone near Kudupu on the city outskirts.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm