ಬ್ರೇಕಿಂಗ್ ನ್ಯೂಸ್
30-04-25 11:07 pm Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ. ದೇಶ ವಿರೋಧಿ ಹೇಳಿಕೆ ನೀಡಿದ್ದರೂ, ಅದಕ್ಕಾಗಿ ಗುಂಪು ಸೇರಿ ಥಳಿಸಿ ಹತ್ಯೆ ಮಾಡುವುದು ಯಾವ ನ್ಯಾಯ. ದೇಶದ್ರೋಹಿ ಕಾಯ್ದೆಯಡಿ ಕೇಸು ದಾಖಲಿಸಿದ್ದನ್ನು ನಾವು ನೋಡಿದ್ದೇವೆ. ಸಿದ್ದರಾಮಯ್ಯ ಸರಕಾರಕ್ಕೆ ಪ್ರಾಮಾಣಿಕತೆ ಇದ್ದರೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ನೇಮಿಸಲಿ ಎಂದು ಎಸ್ಡಿಪಿ ಜಿಲ್ಲಾಧ್ಯಕ್ಷ ರಿಯಾಜ್ ಪರಂಗಿಪೇಟೆ ಆಗ್ರಹಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನಲ್ಲಿ ಬಜರಂಗದಳ ನಾಯಕರು ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಪೊಲೀಸರು ಕೇಸು ದಾಖಲಿಸುತ್ತಾರೆ. ಇಲ್ಲಿಯ ಪೊಲೀಸರು ಸಂಘ ಪರಿವಾರದ ಕೈಯಲ್ಲಿದ್ದಾರೆಯೇ ಎಂದು ನಾವು ಪ್ರಶ್ನಿಸುತ್ತೇವೆ. ಅವರಿಗೆ ಸಂಬಳ ಕೊಡುವುದು ನಮ್ಮ ದುಡ್ಡಿನಲ್ಲಿ. ಸಂಘ ಪರಿವಾರದ ದುಡ್ಡಿನಲ್ಲಿ ಅಲ್ಲ. ಮೊನ್ನೆ ಯಾವುದೋ ವಿಚಾರಕ್ಕೆ ಜಾಲತಾಣದಲ್ಲಿ ಬರೆದಿದ್ದಾರೆ ಎಂಬ ಕಾರಣಕ್ಕೆ ಸಂಘ ಪರಿವಾರದ ನಾಯಕರು ಆಗ್ರಹಿಸಿದ್ದಾರೆ ಎಂದ ಕೂಡಲೇ ಪೊಲೀಸರು ಕೇಸು ದಾಖಲಿಸಿದ್ದಾರೆ.
ಅಶ್ರಫ್ ಹತ್ಯೆ ಪ್ರಕರಣವನ್ನು ಎಸ್ಡಿಪಿಐ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದು, ಯಾವುದೇ ಹಂತದ ವರೆಗೂ ನಾವು ಬಿಡುವುದಿಲ್ಲ. ಆರೋಪಿಗಳಿಗೆ ಗರಿಷ್ಠ ಶಿಕ್ಷೆ ಸಿಗುವ ವರೆಗೂ ನಾವು ಒಯ್ಯಲಿದ್ದೇವೆ. ಇಲ್ಲಿಯ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ. ಈ ಬಗ್ಗೆ ಬೇರೆ ಕಡೆಯ ಅಧಿಕಾರಿಗಳ ಮೂಲಕ ತನಿಖೆಗೆ ಆಗ್ರಹಿಸುತ್ತೇವೆ ಎಂದು ಹೇಳಿದರು. ನೂರಾರು ಎಸ್ಡಿಪಿಐ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು.
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
The Social Democratic Party of India (SDPI) staged a strong protest in Mangaluru on Tuesday, demanding the immediate arrest of Ravindra Nayak, a close aide of BJP MLA Bharath Shetty, in connection with the Kudupu murder case.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm