ಬ್ರೇಕಿಂಗ್ ನ್ಯೂಸ್
01-05-25 10:06 pm Mangalore Correspondent ಕ್ರೈಂ
ಮಂಗಳೂರು, ಮೇ 1 : ಮಂಗಳೂರಿನಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (32) ಎಂಬಾತನನ್ನು ನಾಲ್ವರ ತಂಡವೊಂದು ತಲವಾರಿನಲ್ಲಿ ಕೊಚ್ಚಿ ಕೊಲೆ ಮಾಡಿದೆ.
ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಎಂಬ ಯುವಕನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಕೊಲೆಯಾದವನು. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲವಾರು ದಾಳಿ ನಡೆಸಿದ್ದು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಂದು ಹಾಕಿದ್ದಾರೆ. ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.
2022ರ ಜುಲೈ 28ರಂದು ಸುರತ್ಕಲ್ ಪೇಟೆಯಲ್ಲಿ ಫಾಜಿಲ್ ಹತ್ಯೆಯಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ನಡೆದಿತ್ತು ಎನ್ನಲಾಗಿತ್ತು. ಫಾಜಿಲ್ ಹತ್ಯೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಪ್ರತೀಕಾರ ರೂಪದಲ್ಲಿ ಈಗ ಕೊಲೆ ಮಾಡಲಾಗಿದೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದಲ್ಲಿದ್ದು ಗೋರಕ್ಷಣೆ ವಿಷಯದಲ್ಲಿ ಸಕ್ರಿಯನಾಗಿದ್ದ. ಕೊಲೆ, ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ. ಇಂದು ರಾತ್ರಿ 8.30ರ ಸುಮಾರಿಗೆ ಆತನ ಮೇಲೆ ತಲವಾರು ದಾಳಿ ಮಾಡಿ ಬರ್ಬರವಾಗಿ ಕೊಂದು ಹಾಕಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
In a chilling act of revenge, Suhas Shetty, the prime accused in the murder of Fazil in Surathkal, was brutally murdered in Bajpe. The incident has sparked high tension across Mangalore, raising concerns of further unrest in the region. Suhas Shetty had been identified as the key perpetrator behind the killing of Fazil, which itself was believed to be a retaliatory act following the murder of BJP youth worker Praveen Nettaru in 2022.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 10:45 pm
HK News Desk
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm