ಬ್ರೇಕಿಂಗ್ ನ್ಯೂಸ್
03-05-25 10:57 pm Mangalore Correspondent ಕರಾವಳಿ
ಮಂಗಳೂರು, ಮೇ 3 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸ್ಥಳೀಯ ಜನಪ್ರತಿನಿಧಿಗಳ ಜತೆಗೆ ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ ಸ್ಥಾಪನೆಯ ಘೋಷಣೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕುಟುವಾಗಿ ಟೀಕಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದರೆ, ಇಂಥಹ ಸೂಕ್ಷ್ಮ ವಿಚಾರದ ಬಗ್ಗೆ ಗೃಹ ಸಚಿವರು ಇಲ್ಲಿನ ಯಾವುದೇ ಜನಪ್ರತಿನಿಧಿಗಳೊಂದಿಗೆ ಚರ್ಚಿಸುವುದಾಗಲಿ ಅಥವಾ ಪರಿಸ್ಥಿತಿ ಬಗ್ಗೆ ಅವರ ಅಭಿಪ್ರಾಯವನ್ನು ಪಡೆಯುವ ಪ್ರಯತ್ನವನ್ನಾಗಲಿ ಮಾಡಿಲ್ಲ. ಪೊಲೀಸರ ಜತೆ ಕಾನೂನು ಸುವ್ಯವಸ್ಥೆ ಸಭೆ ನಡೆಸಿರುವ ಗೃಹ ಸಚಿವರು ಅದಕ್ಕೂ ಮುನ್ನ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಲು ಉತ್ಸಾಹ ತೋರಿದ್ದಾರೆ. ಈ ವಿಚಾರದಲ್ಲಿ ಸಚಿವರು ಜನಪ್ರತಿನಿಧಿಗಳನ್ನು ಕಡೆಗಣಿಸಿ ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಆ ಮೂಲಕ, ಗೃಹ ಸಚಿವರು ಈ ಪ್ರದೇಶದ ಸಂವೇದನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದು, ಸ್ಥಳೀಯ ಜನರ ಭಾವನೆಗಳನ್ನು ಮತ್ತು ವಾಸ್ತವಿಕ ಪರಿಸ್ಥಿತಿಯನ್ನು ಕಡೆಗಣಿಸಿದಂತಾಗಿದೆ ಎಂದು ಕ್ಯಾ. ಚೌಟ ಆರೋಪಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಮೊದಲು ವೈಯಕ್ತಿಕ ದ್ವೇಷ ಮತ್ತು ಗ್ಯಾಂಗ್ ವಾರ್ ಎಂದು ಬಿಂಬಿಸಿದ್ದ ಕಾಂಗ್ರೆಸ್ ಸರ್ಕಾರ, ಪ್ರಕರಣದ ಸತ್ಯಾಂಶ ಹೊರಬಂದ ಬಳಿಕ ಅದಕ್ಕೆ ಕೋಮು ಬಣ್ಣ ಕಟ್ಟುವ ಪ್ರಯತ್ನ ಮಾಡುತ್ತಿದೆ. ಈಗ ಅವರ ನಿಲುವು ಹೇಗೆ ಬದಲಾಗಿದ್ದು? ಈಗಲಾದರೂ ಈ ಕಾಂಗ್ರೆಸ್ ಸರ್ಕಾರವು ಸುಹಾಸ್ ಹಿಂದೂ ಆಗಿರುವುದಕ್ಕೆ ಹತ್ಯೆಯಾಗಿದೆ ಎಂದು ಬಹಿರಂಗವಾಗಿ ಹೇಳುವ ಧೈರ್ಯ ತೋರುತ್ತದೆಯೇ? ಇಂಥಹ ಗಂಭೀರ ಹಾಗೂ ಸೂಕ್ಷ್ಮ ಪ್ರಕರಣಗಳಲ್ಲಿಯೂ ಕೇವಲ ಒಂದು ಸಮುದಾಯವನ್ನಷ್ಟೇ ಓಲೈಸುವ ಈ ಸಿದ್ದರಾಮಯ್ಯ ಸರ್ಕಾರದ ನಿಜವಾದ ಅಜೆಂಡಾ ಏನು? ಎಂದು ಕ್ಯಾ. ಚೌಟ ಪ್ರಶ್ನಿಸಿದ್ದಾರೆ.
ಅತ್ಯಂತ ನೋವಿನ ಸಂಗತಿ ಅಂದರೆ ಪ್ರವೀಣ್ ನೆಟ್ಟಾರ್, ದೀಪಕ್ ರಾವ್ ಹಾಗೂ ಅದಕ್ಕೂ ಹಿಂದಿನ ನಮ್ಮ ಅನೇಕ ಕಾರ್ಯಕರ್ತರಂತೆ ಸುಹಾಸ್ ಶೆಟ್ಟಿಯೂ ಅಪ್ಪಟ ಹಿಂದೂ ರಾಷ್ಟ್ರವಾದಿ ಆಗಿದ್ದಕ್ಕಾಗಿ ಇಸ್ಲಾಮಿಕ್ ಮೂಲಭೂತವಾದಿ ಮನಸ್ಥಿತಿಗಳಿಂದ ಕೊಲೆಯಾಗಿದ್ದಾರೆ. ಈ ಕಾಂಗ್ರೆಸ್ ಸರ್ಕಾರವು ಕರಾವಳಿಯನ್ನು ಕೋಮು ಗಲಭೆ ಪೀಡಿತ ಎಂದು ಹಣೆಪಟ್ಟಿ ಕಟ್ಟಿ ನೈಜ ಪರಿಸ್ಥಿತಿಯನ್ನು ಎದುರಿಸುವ ಬದಲು, ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ. ಈ ಘಟನೆ ಕೋಮು ಹಿಂಸಾಚಾರವಲ್ಲ, ಧಾರ್ಮಿಕ ವೈಷಮ್ಯವೂ ಅಲ್ಲ. ಇದು ರಾಷ್ಟ್ರೀಯತೆ ಮತ್ತು ಇಸ್ಲಾಮಿಕ್ ಮೂಲಭೂತವಾದದ ನಡುವಿನ ಹೋರಾಟ. ಕಾಂಗ್ರೆಸ್ ನ ವೋಟ್ ಬ್ಯಾಂಕ್ ರಾಜಕಾರಣ ಮತ್ತು ನಕಲಿ ಜಾತ್ಯತೀತ ನೀತಿಗಳಿಂದಾಗಿ ಇಸ್ಲಾಮಿಕ್ ಮೂಲಭೂತವಾದಕ್ಕೆ ಪ್ರಚೋದನೆ ಸಿಕ್ಕಿರುವುದರ ಪರಿಣಾಮ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಅವರು ಘೋಷಿಸಿದ 'ಕೋಮು ವಿರೋಧಿ ಕಾರ್ಯಪಡೆ'ಯು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು ಪ್ರಸ್ತಾಪಿಸಿದ್ದ ವಿವಾದಾತ್ಮಕ ಕೋಮು ಹಿಂಸಾಚಾರ ಕರಡು ಮಸೂದೆಯಿಂದ ಪ್ರೇರಣೆ ಪಡೆದಂತಿದೆ. ಆ ಮಸೂದೆಯು ಕೋಮು ಸೌಹಾರ್ದತೆಯ ಹೆಸರಿನಲ್ಲಿ ಮುಸ್ಲಿಮರನ್ನು ಓಲೈಸಿ ಹಿಂದೂ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸಿತ್ತು. ಕೋಮು ಹಿಂಸಾಚಾರವನ್ನು ತಡೆಗಟ್ಟುವ' ನೆಪದಲ್ಲಿ ಹಿಂದೂಗಳು, ಹಿಂದೂ ಸಂಘಟನೆಗಳು ಹಾಗೂ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲವನ್ನೂ ಗುರಿಯಾಗಿಸುವ ಉದ್ದೇಶ ಹೊಂದಿತ್ತು. ಅದೇ ರೀತಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ ಉದ್ದೇಶ ಕೂಡ ಓಲೈಕೆ ರಾಜಕಾರಣದ ಮುಂದುವರಿದ ಭಾಗವಾದಂತಿದೆ. ಈ ಹಿಂದೆ ಹಿಂದೂಗಳನ್ನು ಮೂರ್ಖರನ್ನಾಗಿಸಿ ಅವರ ಹಕ್ಕುಗಳನ್ನು ತುಳಿದು ಓಲೈಕೆಯ ನೀತಿ ನಿರ್ಧಾರಗಳನ್ನು ಜನರ ಮೇಲೆ ಹೇರಲಾಗುತ್ತಿತ್ತು. ಆದರೆ ಈಗ ಇರುವುದು ಕಾಂಗ್ರೆಸ್ ಯುಗದ ಭಾರತವಲ್ಲ ಎಂಬುದನ್ನು ಮುಸ್ಲಿಮರನ್ನು ಓಲೈಸುವ ಈ ನಾಯಕರು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.
ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ
ಹಿಂದು ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕುವೈಟ್ ಭೇಟಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬಂದಿದ್ದು, ಮಂಗಳೂರಿಗೆ ಆಗಮಿಸಿದ ಕೂಡಲೇ ಸುಹಾಸ್ ಶೆಟ್ಟಿ ಅವರ ಕಾರಿಂಜದಲ್ಲಿರುವ ಮನೆಗೆ ಭೇಟಿ ನೀಡಿ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಜತೆಗೆ ಧೈರ್ಯ ತುಂಬಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ವಿದೇಶದಲ್ಲಿದ್ದ ಕಾರಣ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾಗಿ ನೊಂದವರಿಗೆ ಧೈರ್ಯ ತುಂಬಲು ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಗನನ್ನು ಕಳೆದುಕೊಂಡು ತೀವ್ರ ನೋವಿನಲ್ಲಿರುವ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದಕ್ಕೆ ಎಲ್ಲ ರೀತಿಯ ಸಹಾಯ, ಬೆಂಬಲ ನೀಡಲಾಗುವುದು. ಮನೆಗೆ ಆಧಾರಸ್ತಂಭವಾಗಿದ್ದ ಸುಹಾಸ್ ಸಾವಿನಿಂದ ಅವರ ಕುಟುಂಬ ದಿಕ್ಕು ತೋಚದ ಸ್ಥಿತಿಯಲ್ಲಿದೆ. ತಾಯಿ ಕೂಡ ಅನಾರೋಗಕ್ಕೆ ಒಳಗಾಗಿದ್ದು, ಸೂಕ್ತ ಆರ್ಥಿಕ ಬೆಂಬಲದ ಅಗತ್ಯವಿದೆ. ಹೀಗಿರುವಾಗ, ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರವನ್ನು ನೀಡಬೇಕು. ಅಲ್ಲದೆ, ಪ್ರಕರಣವನ್ನು ಎನ್‌ಐಎ ತನಿಖೆಗೆ ಒತ್ತಡ ಹೇರುವ ಮೂಲಕ ಸುಹಾಸ್ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಸಂಸದರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
Dakshina Kannada MP Capt. Brijesh Chowta on Saturday, May 3, criticised Karnataka Home Minister G. Parameshwara for visiting Mangaluru in connection with the Suhas Shetty murder case and making announcements without involving any of the local elected representatives.
04-05-25 01:18 pm
Bangalore Correspondent
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm