ಬ್ರೇಕಿಂಗ್ ನ್ಯೂಸ್
20-12-20 04:09 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಪಂಚಾಯತ್ ಚುನಾವಣೆಗೆ ಇನ್ನೆರಡೇ ದಿನ ಇರುವಾಗ, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಯು.ಟಿ.ಖಾದರ್ ಮತ್ತು ಕಾಂಗ್ರೆಸ್ ನಾಯಕರ ಫೋಟೊ ಬಳಸಿ, ಕರಪತ್ರಗಳನ್ನು ಅಭ್ಯರ್ಥಿಗಳ ಪರವಾಗಿ ಮನೆ ಮನೆಗೆ ಹಂಚುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಈ ಬಗ್ಗೆ ಬಿಜೆಪಿ ನಾಯಕರು ಮಂಗಳೂರು ಸಹಾಯಕ ಆಯುಕ್ತರಿಗೆ ದೂರು ನೀಡಿದ್ದಾರೆ.
ಬಾಳೆಪುಣಿ ಪಂಚಾಯತ್ ವ್ಯಾಪ್ತಿಯ ನಾಲ್ಕನೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶಾಸಕ ಯು.ಟಿ.ಖಾದರ್ ಸಾಧನೆಗಳ ಕುರಿತ ಕರಪತ್ರಗಳನ್ನು ಹಂಚುತ್ತಿದ್ದು ಈ ಬಗ್ಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಅವರು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅವರಿಗೆ ದೂರು ನೀಡಿದ್ದಾರೆ.

ಬಾಳೆಪುಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಈ ಬಾರಿ ಮತ್ತೆ ಕಾಂಗ್ರೆಸ್ ಬೆಂಬಲಿತ ನಾಲ್ಕನೇ ವಾರ್ಡ್ ನ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿದ್ದು , ವಾರ್ಡ್ ನ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಮೀಮ ಜೊತೆ ಮನೆ, ಮನೆ ಪ್ರಚಾರಕ್ಕೆ ತೆರಳುತ್ತಿದ್ದಾರೆ. ಈ ವೇಳೆ, ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರ ಭಾವಚಿತ್ರವುಳ್ಳ ಮತ್ತು ಅವರ ಸಾಧನೆ, ಅಭಿವೃದ್ಧಿಯ ಬಗ್ಗೆ ಉಲ್ಲೇಖದ ಕರಪತ್ರಗಳನ್ನು ಮತದಾರರಿಗೆ ಹಂಚಿರುವುದಾಗಿ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದು, ಕರಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತರಾದ ಮದನ್ ಮೋಹನ್ ಅವರಿಗೆ ಸಾಮಾಜಿಕ ಜಾಲತಾಣ ವಾಟ್ಸಪ್ ಮುಖಾಂತರ ದೂರು ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸುವ ಅಭ್ಯರ್ಥಿಗಳಿಗೆ ಪಕ್ಷದ ಅಧಿಕೃತ ಚಿಹ್ನೆಗಳನ್ನು ನೀಡಲಾಗುವುದಿಲ್ಲ. ಕರಪತ್ರಗಳಲ್ಲೂ ಯಾವುದೆ ಪಕ್ಷದ ಚಿಹ್ನೆ ಅಥವಾ ಪಕ್ಷದ ನಾಯಕರ ಸಾಧನೆ ಅಥವಾ ಭಾವಚಿತ್ರಗಳನ್ನು ಪ್ರಕಟಿಸುವಂತಿಲ್ಲ. ಹಾಗಿದ್ದರೂ ಖಾದರ್ ಅವರು ಪ್ರತಿನಿಧಿಸುವ ಮಂಗಳೂರು ಕ್ಷೇತ್ರದಲ್ಲಿ ಈ ರೀತಿಯ ಕರಪತ್ರಗಳು ಮತದಾರರ ಮನೆ ಮನೆ ಹರಿದಾಡುತ್ತಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
Balepuni panchayat 4th ward constants were found distributing flyers with U T Khader and other congress leaders pictures in Ullal. A case has been filed to Mangalore Corportaiton Assist commissioner.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm