ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm