ಬ್ರೇಕಿಂಗ್ ನ್ಯೂಸ್
11-05-25 05:01 pm Mangalore Correspondent ಕರಾವಳಿ
ಮಂಗಳೂರು, ಮೇ 11 : ಪಿಲಿಕುಳ ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅಲ್ಪಕಾಲದ ಅಸೌಖ್ಯದ ಬಳಿಕ ಭಾನುವಾರ ಬೆಳಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗಲಿದ್ದಾರೆ.
ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ 'ಸಸ್ಯಕಾಶಿ' ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವ ವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ (1988–90) ಬ್ಯಾಚ್ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಪೂರೈಸಿದ್ದರು. ತಮ್ಮ ಸಂಶೋಧನೆಗಳ ಮೂಲಕ ಅನೇಕ ನಶಿಸಿ ಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು. ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯ ಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರ, ಕಾರ್ಯಾಗಾರಗಳನ್ನು ನಡೆಸಿಕೊಟ್ಟಿದ್ದಾರೆ.
Dr. Suryaprakash Shenoy, Chief Scientist at the Botany Division of Pilikula Dr. Shivaram Karanth Nisargadhama, passed away on Sunday morning at his residence in Hosmatha, Kadaba, following a brief illness.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm