ಬ್ರೇಕಿಂಗ್ ನ್ಯೂಸ್
12-05-25 11:26 am HK News Desk ಕರಾವಳಿ
ಉಡುಪಿ, ಮೇ 12 : ಜೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನಸ್ಸು ಗೆದ್ದಿದ್ದ ಕಾಮಿಡಿ ಕಿಲಾಡಿಗಳು ಶೋ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ತನ್ನ ಗೆಳೆಯನ ಮನೆಯಲ್ಲಿ ಮೆಹಂದಿ ಪಾರ್ಟಿ ನಡೆಸುತ್ತಿದ್ದಾಗ ದಿಢೀರ್ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಆಪ್ತರ ಮಾಹಿತಿ ಪ್ರಕಾರ, ಕಾರ್ಕಳದ ಮಿಯ್ಯಾರಿನಲ್ಲಿ ನಡೆದ ಗೆಳೆಯನ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ರಾಕೇಶ್ ನಿಧನ ಸುದ್ದಿ ಕನ್ನಡ ಕಿರುತೆರೆ ಲೋಕ, ತುಳು ರಂಗಭೂಮಿ ಕಲಾವಿದರಿಗೂ ಅಚ್ಚರಿ ತಂದಿದೆ. ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಶಾಕ್ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ರಾಕೇಶ್ ನೆನೆದು ಹೀಗೆಂದು ಪೋಸ್ಟ್ ಮಾಡಿದ್ದಾರೆ. ‘ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

‘ಕಾಮಿಡಿ ಕಿಲಾಡಿಗಳು ಸೀಸನ್ -3’ ರ ಗ್ರ್ಯಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ಉಡುಪಿ ಜಿಲ್ಲೆಯ ಹೂಡೆ ನಿವಾಸಿ ರಾಕೇಶ್ ಪೂಜಾರಿಗೆ ಟ್ರೋಫಿ ಮತ್ತು ಎಂಟು ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿತ್ತು. ರಾಕೇಶ್ ಅದಕ್ಕೂ ಹಿಂದೆ ಮಂಗಳೂರಿನ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ‘ಕಡ್ಲೆ ಬಜಿಲ್’ ತುಳು ಕಾರ್ಯಕ್ರಮದಲ್ಲಿ ನಟಿಸಿದ್ದರು. ಕನ್ನಡದಲ್ಲಿ ಸುದೀಪ್ ಅಭಿನಯದ ಪೈಲ್ವಾನ್, ಇದು ಎಂತ ಲೋಕವಯ್ಯ ಚಿತ್ರದಲ್ಲೂ ನಟಿಸಿದ್ದರು. ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲು ಬಣ್ಣ ಹಚ್ಚಿ ಖ್ಯಾತಿ ಗಳಿಸಿದ್ದರು. ತುಳುವಿನಲ್ಲಿ ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕ್ಕೆಲ್ ನಾಟಕ, ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಲೆ ತೆಲಿಪಾಲೆ, ಮೇ 22, ಸ್ಟಾರ್, ತೂಯಿನಾಯೆ ಪೋಯೆ ಮುಂತಾದ ರಿಯಾಲಿಟಿ ಶೋಗಳಲ್ಲು ಪ್ರದರ್ಶನ ನೀಡಿದ್ದಾರೆ. ರಾಕೇಶ್ ಪೂಜಾರಿ ತಾಯಿ ಮತ್ತು ತಂಗಿಯನ್ನು ಅಗಲಿದ್ದು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Television and film actor Rakesh Poojary, who was also crowned the winner of 'Comedy Khiladigalu Season 3', died due to a heart attack. Poojary was 33. The incident occurred during a Mehndi ceremony near Nitte in Karkala, Udupi district. He reportedly collapsed late last night.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm