ಗ್ರಾಪಂ ಚುನಾವಣೆ ಹಿನ್ನೆಲೆ ; ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೆಕ್ಷನ್ ಜಾರಿ

21-12-20 10:54 am       Mangalore Correspondent   ಕರಾವಳಿ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮಂಗಳೂರು, ಡಿ.20 : ಗ್ರಾಪಂ ಚುನಾವಣೆ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ ಡಿ.21ರಂದು ಬೆಳಗ್ಗೆ 8 ಗಂಟೆಯಿಂದ ಡಿ.22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಚಾಲ್ತಿಯಲ್ಲಿರಲಿದೆ.

ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಯಾವುದೇ ಆಯುಧ, ಕತ್ತಿ , ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ಹಾಗೂ ಸಾಗಿಸುವುದು ನಿಷಿದ್ಧ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆ, ಚಿತ್ರಗಳ ಪ್ರದರ್ಶನ, ಪ್ರಸಾರ, ಪತ್ರಿಕಾ ಪ್ರಕಟನೆ, ಭಿತ್ತಿಪತ್ರ ಅಂಟಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

144 section has been imposed in the city for peaceful Panchayat Elections in Mangalore.