ಬ್ರೇಕಿಂಗ್ ನ್ಯೂಸ್
13-05-25 10:33 pm Mangalore Correspondent ಕರಾವಳಿ
ಮಂಗಳೂರು, ಮೇ 13 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ನ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ನೀಡಿ ವಾಯುಸೇನೆ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ದೇಶದ ಸೈನಿಕರ ಆತ್ಮಸ್ಥೈರ್ಯವನ್ನು ಇಮ್ಮಡಿಗೊಳಿಸುವ ಜತೆಗೆ ಪಾಕಿಸ್ತಾನಕ್ಕೂ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಪ್ರಧಾನ ಮಂತ್ರಿ ಮೋದಿ ಅವರು ದೇಶದ ಪ್ರಮುಖ ವಾಯುನೆಲೆಗೆ ಪಾಕಿಸ್ತಾನದ ವಿರುದ್ಧ ಸಂಘರ್ಷ ನಡೆಯುತ್ತಿರುವಾಗಲೇ ಭೇಟಿ ನೀಡಿರುವುದು ಗಮನಾರ್ಹ ಬೆಳವಣಿಗೆ. ಒಂದು ರೀತಿಯಲ್ಲಿ ದೇಶದ ನಾಯಕನೇ ಯುದ್ಧಭೂಮಿಯಲ್ಲಿ ಕಾಣಿಸಿಕೊಂಡು ಕಾರ್ಯಾಚರಣೆ ಮುಂಚೂಣಿಯಲ್ಲಿರುವ ನಮ್ಮ ಸೈನಿಕರು, ಸೇನಾಧಿಕಾರಿಗಳಿಗೆ ಮತ್ತಷ್ಟು ಧೈರ್ಯ, ಆತ್ಮಬಲವನ್ನು ತುಂಬಿದ್ದಾರೆ. ಓರ್ವ ಯೋಧನಿಗೆ ಶತ್ರುಗಳನ್ನು ಹಿಮ್ಮಟ್ಟಿಸುವ ವೇಳೆ ದೇಶದ ಆಡಳಿತದ ಚುಕ್ಕಾಣಿ ಹಿಡಿದ ನಾಯಕ ಬೆನ್ನುತಟ್ಟಿದಾಗ, ಆತನಿಗೆ ಸಿಗುವ ಹುಮ್ಮಸ್ಸು ಅಷ್ಟಿಷ್ಟಲ್ಲ. ಅದು ಆತನ ಧೈರ್ಯವನ್ನು ಇಮ್ಮಡಿಗೊಳಿಸುತ್ತದೆ, ಕರ್ತವ್ಯ ಪ್ರಜ್ಞೆ ಹೆಚ್ಚಿಸುತ್ತದೆ ಮತ್ತು ದೇಶಕ್ಕಾಗಿ ಇನ್ನಷ್ಟು ತ್ಯಾಗ ಮಾಡಲು ಪ್ರೇರೇಪಿಸುತ್ತದೆ ಎಂಬುದನ್ನು ಓರ್ವ ಸೈನಿಕನಾಗಿ ನಾನು ಸ್ಪಷ್ಟವಾಗಿ ಹೇಳಬಲ್ಲೆ ಎಂದು ಕ್ಯಾ. ಬ್ರಿಜೇಶ್ ಅಭಿಪ್ರಾಯಪಟ್ಟಿದ್ದಾರೆ.
"ಯುದ್ಧಭೂಮಿಯಲ್ಲಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಹೋರಾಡುವ ಯೋಧರ ಶೌರ್ಯ, ತ್ಯಾಗ ಮತ್ತು ಪರಿಶ್ರಮವನ್ನು ಗುರುತಿಸಿ ಗೌರವಿಸಿದಾಗ ಸೈನಿಕರ ಮತ್ತು ಸೇನೆಯ ಆತ್ಮವಿಶ್ವಾಸ ಮತ್ತಷ್ಟು ವೃದ್ದಿಸುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮ ಸಶಸ್ತ್ರ ಪಡೆಗಳು ಮತ್ತಷ್ಟು ಬಲಶಾಲಿ ಮತ್ತು ಸನ್ನದ್ಧವಾಗಿದ್ದು, ವಿಶ್ವದಲ್ಲಿ ಶ್ರೇಷ್ಠ ಮಟ್ಟದಲ್ಲಿವೆ. ಆದಂಪುರ ವಾಯುನೆಲೆಗೆ ಭೇಟಿ ನೀಡುವ ಮೂಲಕ ಪ್ರಧಾನಮಂತ್ರಿಗಳು ವಾಯು ಯೋಧರಿಗೆ ಆತ್ಮಸ್ಥೈರ್ಯ ಹೆಚ್ಚಿಸಿದ್ದರೆ ಅತ್ತ ಪಾಕಿಸ್ತಾನದಂತಹ ಶತ್ರುಗಳಲ್ಲಿ ನಡುಕ ಹುಟ್ಟಿಸಿದ್ದಾರೆ ಎಂದಿದ್ದಾರೆ.
ನಮ್ಮ ಸೇನಾ ಪಡೆಗಳು ವಿಶ್ವದ ಅತ್ಯುತ್ತಮ ಮಿಲಿಟರಿ ಸಾಧನಗಳನ್ನು ಹೊಂದಿದ್ದು, ಇದೀಗ ನಾವು ʼಆಪರೇಷನ್ ಸಿಂಧೂರ್ʼ ಮೂಲಕ ನಮ್ಮ ಮಿಲಿಟರಿ ಸಾಮರ್ಥ್ಯ, ಶಕ್ತಿ ಹಾಗೂ ತಂತ್ರಜ್ಞಾನವನ್ನು ಇಡೀ ಜಗತ್ತಿಗೆ ಸಾಬೀತುಪಡಿಸಿದ್ದೇವೆ. ಆತ್ಮನಿರ್ಭರ್ ಭಾರತ್ ಮತ್ತು ಮೇಕ್ ಇನ್ ಇಂಡಿಯಾ ಉಪಕ್ರಮಗಳ ಮೂಲಕ ರಕ್ಷಣಾ ವಲಯದಲ್ಲಿ ಸಾಧಿಸಲಾದ ಸ್ವದೇಶೀಕರಣ ಮತ್ತು ಆಧುನೀಕರಣದ ಒಂದು ಸ್ಪಷ್ಟ ಚಿತ್ರಣವನ್ನು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ವಿಶ್ವವು ಕಂಡಿದೆ. ಒಟ್ಟಾರೆ ಪ್ರಧಾನ ಮಂತ್ರಿಗಳ ಈ ಭೇಟಿಯಿಂದ ಸೈನಿಕರ ಮನೋಬಲ, ಆತ್ಮಸ್ಥೈರ್ಯ ಒಂದೆಡೆಯಾದ್ರೆ, ಪ್ರಧಾನಿಯವರಲ್ಲಿರುವ ರಾಷ್ಟ್ರಪ್ರೇಮ, ದೇಶದ ರಕ್ಷಣೆಯೆಡೆಗಿನ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
PM Modi Makes Surprise Visit to Adampur Airbase, Boosts Morale of Soldiers, Sends Strong Message to Enemies says MP Capt Brijesh Chowta
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm