Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾರಿ ಸಾವಿಗೆ ಶರಣು ; ತಾಯಿಯೂ ಆತ್ಮಹತ್ಯೆ ಯತ್ನ, ಸ್ಥಳೀಯರಿಂದ ರಕ್ಷಣೆ 

15-05-25 01:34 pm       Udupi Correspondent   ಕರಾವಳಿ

ಪತಿ ಮತ್ತು ಮಗ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ನೋಡಿದ ಪತ್ನಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ(56) ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಎಂದು ಗುರುತಿಸಲಾಗಿದೆ. 

ಕುಂದಾಪುರ, ಮೇ 15 : ಪತಿ ಮತ್ತು ಮಗ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ನೋಡಿದ ಪತ್ನಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ(56) ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಎಂದು ಗುರುತಿಸಲಾಗಿದೆ. 

ಮಾಧವ ದೇವಾಡಿಗರ ಪತ್ನಿ ತಾರಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾರಾ ದೇವಾಡಿಗ ಬಾವಿಗೆ ಹಾರಿದ್ದಾರೆ. ಅವರ ಕೂಗು ಕೇಳಿದ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Family sucide attempt

Family sucide attempt

Family sucide attempt

Family sucide attempt

Family sudcide attempt

ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿದ್ದುದರಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

In a tragic incident in Thekkatte, three members of a single family allegedly attempted suicide early Thursday morning, resulting in the deaths of a father and son, while the mother remains in critical condition. The deceased have been identified as Madhava Devadiga (56), an employee at Ankadakatte petrol bunk, and his son Prasad Devadiga (22). Tara Devadiga, the wife of Madhava, is currently undergoing treatment and is said to be in a serious condition.