ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm