ಬ್ರೇಕಿಂಗ್ ನ್ಯೂಸ್
16-05-25 06:05 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲು ಯತ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಏರ್ಪೋರ್ಟ್ ನಿಂದ ಮಂಗಳೂರಿಗೆ ಬರುತ್ತಿದ್ದಾಗ ಯೆಯ್ಯಾಡಿ ಬಳಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಆದರೆ ಸಿಎಂ ಬೆಂಗಾವಲು ಪಡೆಯ ಕಾರು ಬರುವುದಕ್ಕೆ ಮುನ್ನವೇ ಕಪ್ಪು ಕೋಟಿನಲ್ಲಿದ್ದ ಸಿಸಿಬಿ ಪೊಲೀಸರು ತಡೆ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗುತ್ತಾ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.
ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಿಸಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.
ಮಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ತೆರಳಬೇಕಿತ್ತು. ಸಿದ್ದರಾಮಯ್ಯ ಚಾಮರಾಜನಗರದಿಂದ ಮಂಗಳೂರಿಗೆ ಆಗಮಿಸುವಾಗಲೇ ಸಂಜೆ ಗಂಟೆ 4.30 ಆಗಿದ್ದರಿಂದ ಉರ್ವಾ ಪ್ರೋಗ್ರಾಂ ಕ್ಯಾನ್ಸಲ್ ಮಾಡಿ ನೇರವಾಗಿ ಪಡೀಲಿಗೆ ತೆರಳಿದ್ದಾರೆ.
BJP Yuva Morcha Members Show Black Flags to CM Siddaramaiah Near Yeyadi in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm