ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am