ಬ್ರೇಕಿಂಗ್ ನ್ಯೂಸ್
21-05-25 07:17 pm Mangalore Correspondent ಕರಾವಳಿ
ಮಂಗಳೂರು, ಮೇ.21: ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಎರಡು ವರ್ಷಗಳಿಗೆ ಪೂರ್ತಿಗೊಳಿಸಲು ಮೇ 21ರ ವರೆಗೆ ರಾಜ್ಯ ಸರಕಾರ ವಿಸ್ತರಿಸಿತ್ತು. 2023ರ ಮೇ 22ರಂದು ಅಲೋಕ್ ಮೋಹನ್ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮೂರು ತಿಂಗಳ ಕಾಲ ಪ್ರಭಾರ ಡಿಜಿಪಿಯಾಗಿದ್ದ ಅವರನ್ನು ಬಳಿಕ ಪೂರ್ಣ ಪ್ರಮಾಣದ ಡಿಜಿಪಿಯಾಗಿ ಸರ್ಕಾರ ನೇಮಿಸಿಕೊಂಡಿತ್ತು.
ಪ್ರಸ್ತುತ ಸೇವಾ ಹಿರಿತನದಲ್ಲಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಪಿ ಡಾ.ಎ.ಎಂ. ಸಲೀಂ ಹಾಗೂ ಡಿಜಿಪಿ ದರ್ಜೆಯ ರಾಮಚಂದ್ರ ರಾವ್ ಹೆಸರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಸ್ಥಾನದ ಅಂತಿಮ ಪಟ್ಟಿಯಲ್ಲಿತ್ತು. ಆದರೆ ಮಗಳು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಕ್ಕೀಡಾದ ರಾಮಚಂದ್ರ ರಾವ್ ಕಡ್ಡಾಯ ರಜೆಯಲ್ಲಿದ್ದಾರೆ. ಹೀಗಾಗಿ ಪ್ರಶಾಂತ್ ಕುಮಾರ್ ಮತ್ತು ಸಲೀಂ ಹೆಸರು ಮುಂಚೂಣಿಯಲ್ಲಿತ್ತು.
ಬಿಹಾರ ಮೂಲದ ಪ್ರಶಾಂತ್ ಕುಮಾರ್ ಠಾಕೂರ್ 1992ನೇ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಡಿಜಿಪಿಯಾಗಲು ಡಿಜಿ- ಐಜಿಪಿ ದರ್ಜೆಯಲ್ಲಿ ರಾಜ್ಯದಲ್ಲಿ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರಬೇಕೆಂಬ ನಿಯಮ ಇದೆ. ಪ್ರಶಾಂತ್ ಕುಮಾರ್ ಸಲೀಂ ಅವರಿಗಿಂತ ಒಂದು ವರ್ಷ ಹೆಚ್ಚು ಸೇವಾ ಹಿರಿತನ ಹೊಂದಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರದ ನಿವಾಸಿ ಕನ್ನಡಿಗರೇ ಆಗಿರುವ ಎಂ.ಎ. ಸಲೀಂ 1993ನೇ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಸಲೀಂ ಅವರನ್ನು ಡಿಜಿಪಿಯಾಗಿ ನೇಮಕಗೊಳಿಸುವ ಬಗ್ಗೆ ಒಲವು ಹೊಂದಿದೆ ಎಂಬ ಮಾತು ಎರಡು ವಾರಗಳ ಮೊದಲೇ ಕೇಳಿಬಂದಿತ್ತು. ಸಲೀಂ ಮುಂದಿನ ವರ್ಷ ಜೂನ್ ವೇಳೆಗೆ ನಿವೃತ್ತರಾಗಲಿದ್ದು, 13 ತಿಂಗಳ ಕಾಲ ಡಿಜಿಪಿಯಾಗಿ ಕರ್ತವ್ಯದಲ್ಲಿ ಇರಲಿದ್ದಾರೆ. ಕಲಬುರಗಿಯಲ್ಲಿ ಎಎಸ್ಪಿ, ಆಬಳಿಕ ಕುಶಾಲನಗರದಲ್ಲಿ ಎಎಸ್ಪಿಯಾಗಿ ಕರ್ತವ್ಯ ಆರಂಭಿಸಿ, 1998ರಲ್ಲಿ ಉಡುಪಿಯಲ್ಲಿ ಎಸ್ಪಿ ಆಗುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 30 ವರ್ಷಗಳ ಕಾಲ ಸೇವಾನುಭವ ಹೊಂದಿದ್ದಾರೆ.
Director General of Police, Criminal Investigation Department (CID), Economic Offences and Special Units, Karnataka, has been appointed as the acting Director General and Inspector General of Police (DG&IGP) of the State. He will officially assume charge this evening.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm