ಬ್ರೇಕಿಂಗ್ ನ್ಯೂಸ್
21-05-25 11:09 pm HK News Desk ಕರಾವಳಿ
ಮಂಗಳೂರು, ಮೇ 21: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕುರಿತಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು ಇದಕ್ಕೆ ವಿಪಕ್ಷ ಮತ್ತು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಆದೇಶ ಪ್ರಕಾರ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗಳು ಹೊರಗಿನ ಔಷಧಿಗಳನ್ನು ಪಡೆಯಲು ಶಿಫಾರಸು ನೀಡಲೇ ಬಾರದು ಎಂಬುದಾಗಿದೆ. ಈ ರೀತಿ ಮಾಡುವುದು ರಾಜ್ಯದ ನೀತಿಗೆ ವಿರುದ್ಧವಾಗಿದ್ದು ಜನೌಷಧಿ ಕೇಂದ್ರಗಳ ಮೂಲಕ ಶೋಷಣೆ ಆಗುತ್ತಿದೆಯೆಂದು ಆರೋಪಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಸುಮಾರು 207 ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಆವರಣದಲ್ಲಿಯೇ ಸ್ಥಾಪನೆಯಾಗಿದೆ. ಜನಸಾಮಾನ್ಯರಿಗೆ ಇದರಿಂದ 80% ವರೆಗೆ ಕಡಿಮೆ ದರದಲ್ಲಿ ಜೆನೆರಿಕ್ ಔಷಧಿಗಳು ದೊರೆಯುತ್ತಿದ್ದವು.
ರಾಜ್ಯ ಸರ್ಕಾರದ ಆದೇಶ ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳಿಗೆ ಮಾತ್ರ ಅನ್ವಯಿಸುತ್ತದೆ. ಜನೌಷಧಿ ಕೇಂದ್ರ ಬಂದ ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲು ಔಷಧಿ ಕೊಡುವ ಬದಲು ಹೆಚ್ಚಿನವುಗಳಿಗೆ ಚೀಟಿ ಬರೆದುಕೊಡುವ ಅಭ್ಯಾಸ ಬೆಳೆದಿತ್ತು. ಜನ ಔಷಧಿ ಕೇಂದ್ರಗಳಲ್ಲಿ ಇಲ್ಲದ ಔಷಧಿಯನ್ನು ದುಬಾರಿ ಹಣ ತೆತ್ತು ಬೇರೆ ಮೆಡಿಕಲ್ ಗಳಿಂದ ತರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿತ್ತು.
ಸರ್ಕಾರದ ನಡೆಗೆ ತೀವ್ರ ಆಕ್ಷೇಪ ;
ಇದೀಗ ದಿಢೀರ್ ಆಗಿ ರಾಜ್ಯ ಸರಕಾರ ಆರೋಗ್ಯ ಇಲಾಖೆ ಸರ್ಕಾರಿ ಆಸ್ಪತ್ರೆ ಆವರಣದ ಜನೌಷಧಿ ಕೇಂದ್ರಗಳ ಲೈಸನ್ಸ್ ರದ್ದುಪಡಿಸಿದ್ದು ಆಕ್ಷೇಪಕ್ಕೂ ಕಾರಣವಾಗಿದೆ. ಜನಔಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಒದಗಿಸುತ್ತಿತ್ತು. ಎಷ್ಟೋ ಜನ ಔಷಧಕ್ಕೆ ಹಣ ಇಲ್ಲ ಎಂದು ಮಾತ್ರೆಗಳನ್ನು ತೆಗೆದುಕೊಳ್ಳದೆ ಇರುವವರನ್ನು ನಾವು ಕಂಡಿದ್ದೇವೆ. ಈ ಯೋಜನೆಯಿಂದ ಅತ್ಯಂತ ಕಡಿಮೆ ದರದಲ್ಲಿ ಔಷಧವನ್ನು ಪಡೆಯುವ ಸೌಲಭ್ಯ ಸಿಕ್ಕಿತ್ತು ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಹೇಳಿಕೆಯಲ್ಲಿ ಆಕ್ಷೇಪಿಸಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, "ಜನಔಷಧಿ ಕೇಂದ್ರಗಳು ಬಡವರಿಗೆ ಅವಶ್ಯಕವಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಔಷಧಿ ಕೊಡಬೇಕು" ಎಂಬ ಹೇಳಿಕೆ ದುರದೃಷ್ಟಕರವಾಗಿದ್ದು, ಈ ಸರ್ಕಾರ ಬಡವರ ವಿರೋಧಿ ನಿಲುವನ್ನು ಸಾಬೀತುಪಡಿಸುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಶೇಕಡಾ 100 ರಷ್ಟು ಔಷಧಿಗಳ ಲಭ್ಯತೆ ಇದೆಯೇ? ಇಲ್ಲದೆ ಹೋದರೆ ಜನಔಷಧಿ ಕೇಂದ್ರವೇ ಅವರಿಗೆ ಆಧಾರ. ಹಾಗಿರುವಾಗ ಈ ಕೇಂದ್ರಗಳನ್ನು ಮುಚ್ಚುವುದು ಸಾಮಾನ್ಯ ಜನರ ಮೇಲೆ ಹೊರೆಯಾಗಲಿದೆ ಎಂದು ಹೇಳಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
Mangalore Govt Cancels Jan Aushadhi Centers Near Public Hospitals; MLC Kishore Slams Move as Anti Poor, Criticizes Health Department's Order
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm