Thokottu Auto Driver Fight, Mangalore: ಅಡ್ಡ ಇಟ್ಟಿದ್ದ ಟೆಂಪೋ ಬದಿಗೆ ಸರಿಸಲು ಹೇಳಿದ್ದಕ್ಕೆ ಬೇಕರಿ ಮಾಲಕನಿಗೆ ಹಲ್ಲೆ ಯತ್ನ ; ತೊಕ್ಕೊಟ್ಟು ಜಂಕ್ಷನ್ನಲ್ಲಿ ರಿಕ್ಷಾ ಚಾಲಕರ ಪುಂಡಾಟಿಕೆ, ಸಿಸಿಟಿವಿಯಲ್ಲಿ ಸೆರೆ 

22-05-25 10:19 pm       Mangalore Correspondent   ಕರಾವಳಿ

ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಉಳ್ಳಾಲ, ಮೇ 22 : ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕರಾದ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನ ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕನಾದ ಇಶಾನ್ ನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬಶೀರ್ ಮತ್ತು ಇಶಾನ್ ಜೊತೆ ಮತ್ತೆ ಕೆಲವು ರಿಕ್ಷಾ ಚಾಲಕರು ದಾಂಧಲೆಗೆ ಕುಮ್ಮಕ್ಕು ನೀಡಿದ್ದಾರೆ. 

ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನ ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಸುಚಿವೃತ ಶೆಟ್ಟಿ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ಪುಂಡ ರಿಕ್ಷಾ ಚಾಲಕರನ್ನ ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕರಾದ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.

ಬಜ್ಪೆಯಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಕೊಲೆಯ ಕಿಚ್ಚು ಜೀವಂತ ಇರುವಾಗಲೇ ಗೂಂಡಾ ರಿಕ್ಷಾ ಚಾಲಕರು ಬೇಕರಿಗೆ ನುಗ್ಗಿ ಧಾಂದಲೆ ನಡೆಸಿರುವುದು ಪೊಲೀಸ್ ಇಲಾಖೆಯನ್ನೂ ಅಲರ್ಟ್ ಮಾಡಿಸಿದೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Mangalore Bakery Owner Assaulted for Asking to Move Parked Tempo, Auto Drivers Rowdyism at Thokottu  Junction Caught on CCTV.