ಬ್ರೇಕಿಂಗ್ ನ್ಯೂಸ್
27-05-25 09:56 pm Mangalore Correspondent ಕರಾವಳಿ
ಮಂಗಳೂರು, ಮೇ.27: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹೀಂ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಶವ ಇರಿಸಿದ ದೇರಳಕಟ್ಟೆ ಯೇನಪೋಯ ಆಸ್ಪತ್ರೆ ಮುಂದೆ ಮುಸ್ಲಿಂ ಯುವಕರು ಜಮಾಯಿಸಿದ್ದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಬಳಿಗೆ ಬಂದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಪ್ರಚೋದನಕಾರಿ ಭಾಷಣ ಮಾಡಿದವರನ್ನು ಅರೆಸ್ಟ್ ಮಾಡಿದರೆ ಈ ರೀತಿ ಅಮಾಯಕರು ಕೊಲೆಯಾಗೋದನ್ನು ತಪ್ಪಿಸಬಹುದಿತ್ತು ಎಂದು ಪೊಲೀಸ್ ಕಮಿಷನರ್ ನಡೆ ಬಗ್ಗೆ ಕಿಡಿಕಾರಿದ್ದಾರೆ. ಅಲ್ಲದೆ, ಯೇನಪೋಯ ಆಸ್ಪತ್ರೆ ಮುಂದೆ ಕತ್ತಲಾಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಮುಸ್ಲಿಂ ಸಂಘಟನೆಗಳ ಜನರು ಜಮಾಯಿಸಿದ್ದು ರಸ್ತೆಯಲ್ಲೇ ನಿಂತು ಪೊಲೀಸರ ವಿರುದ್ಧ ಘೆರಾವ್ ಕೂಗಿದ್ದಾರೆ. ರಸ್ತೆಯನ್ನು ಬಂದ್ ಮಾಡಿದ್ದು ಕಾಂಗ್ರೆಸ್ ಸರಕಾರದ ವಿರುದ್ಧವೂ ಘೆರಾವ್ ಹಾಕುತ್ತಿದ್ದಾರೆ.



ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ ಮಧ್ಯಾಹ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಕೊಳತ್ತಮಜಲು ನಿವಾಸಿ ಅಬ್ದುಲ್ ರಹೀಮ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ಹಿನ್ನೆಲೆ ಎರಡು ಆಸ್ಪತ್ರೆ ಆವರಣದಲ್ಲಿಯೂ ಮುಸ್ಲಿಂ ಸಂಘಟನೆಗಳ ನಾಯಕರು, ಕಾರ್ಯಕರ್ತರು ಸೇರಿದ್ದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೆನಪೋಯ ಆಸ್ಪತ್ರೆಗೆ ಭೇಟಿ ನೀಡಿದ ದ.ಕ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಇಂದು ಮಧ್ಯಾಹ್ನ ದ ವೇಳೆಗೆ ಘಟನೆಯಾಗಿದೆ. ಮರಳು ಸಾಗಾಟಕ್ಕೆಂದು ಹೋದಾಗ ಕೃತ್ಯ ನಡೆದಿದ್ದು, ರಹೀಮ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗ ಮೃತರಾಗಿರೋದು ಗೊತ್ತಾಗಿದೆ. ಇನ್ನೊಬ್ಬನಿಗೆ ಗಾಯವಾಗಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಘಟನೆ ಮತ್ತು ಆರೋಪಿಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಬಂಟ್ವಾಳ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಶಂಕಿತರನ್ನು ಕರೆದು ವಿಚಾರಣೆಯನ್ನು ಮಾಡುತ್ತಿದ್ದೇವೆ.ತನಿಖೆ ನಡೆಯುತ್ತಿರೋದರಿಂದ ಬೇರೆ ಮಾಹಿತಿ ಹೇಳಲು ಸಾಧ್ಯವಿಲ್ಲವೆಂದರು.
ಇದೇ ವೇಳೆ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತು ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಮೇ 30ರ ವರೆಗೆ ಸೆಕ್ಷನ್ ವಿಧಿಸಲಾಗಿದೆ. ಇದಲ್ಲದೆ, ರಾತ್ರಿಯಾಗುತ್ತಿದ್ದಂತೆ ಮಂಗಳೂರಿನಾದ್ಯಂತ ಪೊಲೀಸರನ್ನು ನಿಯೋಜಿಸಿದ್ದು ಅಂಗಡಿ ಬಂದ್ ಮಾಡಿಸಿದ್ದಾರೆ.
Mangalore Muslim Youth Murder in Bantwal Sparks Outrage, Police Commissioner Faces Backlash, Officers Gheraoed, Section Imposed in Mangalore and Bantwal.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm