ಬ್ರೇಕಿಂಗ್ ನ್ಯೂಸ್
01-06-25 11:59 am Mangalore Correspondent ಕರಾವಳಿ
ಮಂಗಳೂರು, ಜೂನ್ 1 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಬ್ದುಲ್ ರಹೀಂ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮುಸ್ಲಿಂ ನಾಯಕರು ಸಭೆ ನಡೆಸಿ, ಕಾಂಗ್ರೆಸ್ ಪಕ್ಷದ ಹುದ್ದೆಗಳಿಗೆ ರಾಜಿನಾಮೆ ಕೊಡಿಸಿರುವುದು, ಪಕ್ಷದ ನಾಯಕರು ಮತ್ತು ಸರಕಾರದ ವಿರುದ್ಧ ಹೇಳಿಕೆ ನೀಡಿರುವುದರ ಬಗ್ಗೆ ಜಿಲ್ಲಾ ಕಾಂಗ್ರೆಸ್ ಆಕ್ಷೇಪಿಸಿದ್ದು, ಪ್ರಮುಖ ನಾಯಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದೆ. ಈ ಬಗ್ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಡಿ. ವಿಕಾಸ್ ಶೆಟ್ಟಿ ನೋಟೀಸ್ ಮಾಡಿದ್ದಾರೆ.
ರಹೀಂ ಕೊಲೆಯ ನಂತರ ಜಿಲ್ಲೆಯ ಜನತೆ ಆತಂಕಕ್ಕೀಡಾಗಿದ್ದಾರೆ. ಅಲ್ಪಸಂಖ್ಯಾತ ಮುಖಂಡರು ಸಭೆ ನಡೆಸಿ ರಾಜಿನಾಮೆ ನೀಡುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಎಂಎಲ್ಸಿಗಳಾದ ಮಂಜುನಾಥ ಭಂಡಾರಿ ಮತ್ತು ಐವಾನ್ ಡಿಸೋಜ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳೂ ಪಕ್ಷದ ಅಲ್ಪಸಂಖ್ಯಾತ ಮುಖಂಡರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಯಾವುದೇ ನಾಯಕರು ಸಭೆ ನಡೆಸುವುದಾಗಲೀ, ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಾಗಲೀ ಮಾಡದಂತೆ ಸೂಚಿಸಿದ್ದಾರೆ.
ಆದರೂ ಸಭೆ ನಡೆಸಿ ಅಲ್ಪಸಂಖ್ಯಾತರು ಪಕ್ಷಕ್ಕೆ ರಾಜಿನಾಮೆ ನೀಡಿರುವುದಾಗಿ ಪತ್ರಿಕಾ ಮತ್ತು ದೃಶ್ಯ ಮಾಧ್ಯಮದಲ್ಲಿ ಬಂದಿರುತ್ತದೆ. ಇದರಿಂದ ಪಕ್ಷದ ಘನತೆಗೆ ರಾಷ್ಟ್ರ ಮಟ್ಟದಲ್ಲಿ ಕುಂದು ಬಂದಿದೆ. ಆದ್ದರಿಂದ ಪಕ್ಷದ ನಾಯಕರು ಪಕ್ಷದ ಶಿಸ್ತಿಗೆ ವಿರುದ್ಧವಾಗಿ ವರ್ತಿಸಿದ್ದೀರಿ, ಪಕ್ಷದ ನಾಯಕರ ಸೂಚನೆಯನ್ನು ನಿರ್ಲಕ್ಷಿಸಿರುತ್ತೀರಿ, ಪಕ್ಷದ ನಾಯಕರ ಬಗ್ಗೆಯೂ ಅವಲಕ್ಷಿಸಿ ಮಾತನಾಡಿರುತ್ತೀರಿ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಮತ್ತು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಅವರಿಗೆ ನೋಟೀಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗೆ ವಿವರಣೆ ನೀಡುವಂತೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೂಚನೆಯಂತೆ ನೋಟೀಸ್ ನೀಡುತ್ತಿರುವುದಾಗಿ ವಿಕಾಸ್ ಶೆಟ್ಟಿ ತಿಳಿಸಿದ್ದಾರೆ.
The Dakshina Kannada District Congress has issued notices to key Muslim leaders following their resignation from party posts and public criticism of the party and state government in connection with the recent murder of Abdul Raheem. District General Secretary T.D. Vikas Shetty confirmed that notices have been served to former Mayor K. Ashraf and Minority Cell District President Shahul Hameed, seeking a written explanation within seven days. The leaders are accused of defying party discipline by conducting an unauthorized meeting and making statements that allegedly damaged the party’s image at the national level.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm