ಬ್ರೇಕಿಂಗ್ ನ್ಯೂಸ್
02-06-25 12:51 pm Mangalore Correspondent ಕರಾವಳಿ
ಬಂಟ್ವಾಳ, ಜೂ 02 : ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 12ರಂದು ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ 17 ದಿನಗಳ ಬಳಿಕ ಎಫ್ಐಆರ್ ದಾಖಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದಿತ್ತು
ಶ್ರದ್ಧಾಂಜಲಿ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಿದ್ದರು. ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಅವರು ಹೇಳಿಕೆ ನೀಡಿದ್ದಾರೆ. ಇದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಎಂ ನಿರ್ದೇಶನದ ಬೆನ್ನಲ್ಲೇ ಕೇಸ್:
ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೇ 31 ರಂದು ತಿಳಿಸಿದ್ದರು.
ಶನಿವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆಗಿನ ಎರಡು ದಿನಗಳ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾಧ್ಯಮಗೋಷ್ಟಿ ನಡೆಸಿದ್ದ ಅವರು, ದ್ವೇಷ ಭಾಷಣ ಸಂಬಂಧ ಕಾನೂನು ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ್ದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದ್ದರು.
ಇನ್ನು ಜಿಲ್ಲೆಗೆ ಹೊಸ ಕಮಿಷನರ್ ಆಗಿ ಬಂದಿರುವ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸ್ ಪಿ ಅರುಣ್ ಕುಮಾರ್ ಪ್ರಚೋದನಾ ಭಾಷಣ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಪೋಲಿಸ್ ಇಲಾಖೆಗೆ ಆರ್ಡರ್ ನೀಡಿದ್ದಾರೆ. ಮುಲಾಜ್ ಇಲ್ಲದೆ ಕ್ರಮ ಕೈಗೊಳ್ಳುತ್ತೇವೆ ಯಾರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
Bantwal Rural police have filed a case against RSS leader Dr Kalladka Prabhakar Bhat for allegedly making provocative statements aimed at triggering unrest in society.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm