ಬ್ರೇಕಿಂಗ್ ನ್ಯೂಸ್
03-06-25 02:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಪೊಲೀಸ್ ಎಫ್ಐಆರ್ ಬೆನ್ನಲ್ಲೇ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಜೂನ್ 10ಕ್ಕೆ ವಿಚಾರಣೆ ಮುಂದೂಡಿದೆ.
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಎಫ್ಐಆರ್ ರದ್ದು ಕೋರಿ ವಕೀಲ ಅರುಣ್ ಶ್ಯಾಮ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. “ಭಾಷಣ ಮಾಡಿದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠ, ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪ ಪಟ್ಟಿ ಸಲ್ಲಿಸುವಂತಿಲ್ಲ. ಅಲ್ಲದೆ, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಹಾಲ್ಒಂದರಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಹಿಂದುತ್ವ ಪರವಾಗಿ ಧ್ವನಿಯೆತ್ತಿ ಸುಹಾಸ್ ಬಲಿಯಾಗಿದ್ದಾನೆ, ಆದರೆ ಈ ರೀತಿ ಬಲಿಯಾಗಿದ್ದು ಕ್ಷುಲ್ಲಕ ಅಂತ ಆಗಬಾರದು ಎನ್ನುವಂತೆ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿ ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು.
ಇದೇ ನೆಪದಲ್ಲಿ 20 ದಿನಗಳ ನಂತರ ಪ್ರಭಾಕರ ಭಟ್ ವಿರುದ್ಧ ಎಸ್ಪಿ ಅರುಣ್ ಸೂಚನೆಯಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2) ಸೆಕ್ಷನ್ ಅಡಿ ಎಫ್ಐಆರ್ ದಾಖಲಾಗಿತ್ತು. ಈ ರೀತಿ ಎಫ್ಐಆರ್ ಹಾಕಿದ್ದು ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು.
The Karnataka High Court has directed that no coercive action be taken against RSS leader Kalladka Prabhakar Bhat in connection with a police FIR registered against him. The court’s interim relief comes as a major reprieve for Bhat, who had approached the court seeking quashing of the FIR.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm