ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am