ಬ್ರೇಕಿಂಗ್ ನ್ಯೂಸ್
06-06-25 05:33 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಲು ಸಿದ್ಧತೆ ನಡೆಸಿದ್ದ ಪೊಲೀಸರಿಗೆ ಎಸಿ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದು, ಪುತ್ತಿಲ ಪರವಾಗಿ ವಾದ ಮಂಡಿಸಿದ್ದಾರೆ.
ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡುವುದಕ್ಕೆ ಇರುವ ಮಾನದಂಡಗಳೇನು ಮತ್ತು ಪೊಲೀಸ್ ಇಲಾಖೆಯಲ್ಲಿ ಮಾಡಿಕೊಂಡಿರುವ ಆರೋಪ ಪಟ್ಟಿ ಅಥವಾ ಆ ಕುರಿತ ದಾಖಲೆ ಏನಿದೆ ಎಂದು ವಕೀಲರು ಉಪ ವಿಭಾಗಾಧಿಕಾರಿ ಮುಂದೆ ಪ್ರಶ್ನೆ ಮಾಡಿದ್ದಾರೆ. ಪುತ್ತಿಲ ಅವರಿಗೆ ನೀಡಿದ್ದ ನೋಟೀಸಿನಲ್ಲಿ ಕಳೆದ ಬಾರಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧಿಸಿದ್ದಾಗ, ಯೋಗಿ ಮತ್ತು ಮೋದಿಯವರ ಫೋಟೋ ಬಳಸಿದ್ದಕ್ಕಾಗಿ ಮಾಡಿದ್ದ ಕೇಸು, 2013ರಲ್ಲಿ ದಾಖಲಾಗಿದ್ದ ಕೇಸಿನ ವಿವರಗಳಿದ್ದವು. ಇವೆರಡೂ ಪ್ರಕರಣಗಳು ಕೋರ್ಟಿನಲ್ಲಿ ಖುಲಾಸೆಗೊಂಡಿವೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಎಸಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸಲು ಮುಂದಾಗಿಲ್ಲ. ಇದರಂತೆ, ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ. ಇದೇ ವೇಳೆ, ಇಂದು ಪುತ್ತೂರು ಎಸಿ ಕೋರ್ಟಿನಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
Setback for Mangalore Police in Arun Puthila Externment Case, AC Court Seeks Proper Documentation, Hearing Postponed.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am