ಬ್ರೇಕಿಂಗ್ ನ್ಯೂಸ್
08-06-25 05:24 pm Mangalore Correspondent ಕರಾವಳಿ
ಮಂಗಳೂರು, ಜೂನ್.8: ಭಾರೀ ಸಂಚಲನ ಎಬ್ಬಿಸಿದ್ದ ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳದ ತನಿಖೆಗೆ ವಹಿಸಿ ಆದೇಶ ಮಾಡಿದೆ. ಈ ಬಗ್ಗೆ ಕೇಂದ್ರ ಗೃಹ ಇಲಾಖೆ ಆದೇಶ ಮಾಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
ಸುಹಾಸ್ ಶೆಟ್ಟಿಯನ್ನು ಕಳೆದ ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ 8.30ರ ವೇಳೆಗೆ ಏಳೆಂಟು ಮಂದಿಯಿದ್ದ ತಂಡ ಅಡ್ಡಹಾಕಿ ತಲವಾರಿನಲ್ಲಿ ಯದ್ವಾತದ್ವಾ ಕಡಿದು ಹತ್ಯೆ ಮಾಡಿತ್ತು. ಈ ಘಟನೆಯ ವಿಡಿಯೋ ವೈರಲ್ ಆಗಿದ್ದರಿಂದ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಘಟನೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಈ ಕೃತ್ಯದಲ್ಲಿ ವಿದೇಶಿ ಫಂಡಿಂಗ್ ಆಗಿದೆ ಮತ್ತು ಭಯೋತ್ಪಾದಕ ಸಂಘಟನೆಗಳು ಕೈಯಾಡಿಸಿವೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಲ್ಲದೆ, ಈ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹ ಮಾಡಿದ್ದರು.
ಆದರೆ ರಾಜ್ಯ ಸರಕಾರ ಎನ್ಐಎ ತನಿಖೆಯ ಅಗತ್ಯವಿಲ್ಲ, ರಾಜ್ಯದ ಪೊಲೀಸರೇ ತನಿಖೆ ಮಾಡುತ್ತಾರೆ ಎಂದು ಹೇಳುತ್ತ ಬಂದಿತ್ತು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ರಾಜ್ಯದ ಗೃಹ ಸಚಿವ ಪರಮೇಶ್ವರ್ ಕೂಡ ಎನ್ಐಎ ತನಿಖೆಯ ಬಗ್ಗೆ ನಿರಾಕರಣೆ ಮಾಡಿದ್ದರು. ಆದರೆ ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ಎನ್ಐಎ ತನಿಖೆ ಆಗಲೇಬೇಕೆಂದು ಸಂಸದ ಬ್ರಿಜೇಶ್ ಚೌಟ ಒತ್ತಾಯಿಸಿದ್ದರಲ್ಲದೆ, ಇದಕ್ಕಾಗಿ ಕೇಂದ್ರ ಗೃಹ ಸಚಿವರನ್ನೂ ಭೇಟಿಯಾಗಿದ್ದರು. ಇದೀಗ ಹಠಾತ್ತಾಗಿ ಎನ್ಐಎ ತನಿಖೆಗೆ ವಹಿಸಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.
ಸುಹಾಸ್ ಶೆಟ್ಟಿ 2022ರ ಜುಲೈನಲ್ಲಿ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಅದೇ ಕಾರಣಕ್ಕೆ ಫಾಜಿಲ್ ಸೋದರನೇ ಸುಪಾರಿ ಕೊಟ್ಟು ಕೊಲ್ಲಿಸಿದ್ದಾನೆಂಬುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿತ್ತು. ಆದರೆ ಈ ಕೃತ್ಯವನ್ನು ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮಾಡಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಪೊಲೀಸರ ತನಿಖೆಯಲ್ಲಿ ಅಂತಹ ಯಾವುದೇ ಮಾಹಿತಿ ಇರಲಿಲ್ಲ. ಈ ಹಿಂದೆ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನೂ ಎನ್ಐಎ ತನಿಖೆಗೆ ವಹಿಸಲಾಗಿತ್ತು. ಆ ಪ್ರಕರಣದಲ್ಲಿ ಪಿಎಫ್ಐಗೆ ಸೇರಿದ 20ಕ್ಕೂ ಹೆಚ್ಚು ಮಂದಿಯನ್ನು ಎನ್ಎಐ ಅರೆಸ್ಟ್ ಮಾಡಿತ್ತು.
The Ministry of Home Affairs (MHA) has assigned the probe into the murder of former Bajrang Dal activist Suhas Shetty to the National Investigation Agency (NIA).
— ANI (@ANI) June 8, 2025
The National Investigation Agency (NIA) will probe the case of Hindu activist Suhas Shetty in Karnataka’s Mangaluru, who was hacked to death by a group of assailants on May 1. The NIA will now probe Shetty’s murder case after it received an order from the Ministry of Home Affairs (MHA). The probe agency will take police remand of all the eight arrested accused and question them in detail about the case.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm