ಬ್ರೇಕಿಂಗ್ ನ್ಯೂಸ್
16-06-25 12:13 pm Mangalore Correspondent ಕರಾವಳಿ
ಪುತ್ತೂರು, ಜೂನ್.16: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು (ಜೂ.16) ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದ್ದು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ ಭಟ್ (41) ಮೃತಪಟ್ಟ ದುರ್ದೈವಿ. ಕಾರ್ಕಳದಿಂದ ಧರ್ಮಸ್ಥಳ ಮಾರ್ಗವಾಗಿ ಸುಮಾರು 30 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ನಸುಕಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶಂಕರನಾರಾಯಣ ಭಟ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರನ್ನು ಮಂಗಳೂರಿನ ಇಂಡಿಯನ್ ಆಸ್ಪತ್ರೆಗೆ ಮತ್ತು ಉಳಿದ ಗಾಯಾಳುಗಳನ್ನು ಪುತ್ತೂರಿನ ವಿವಿಧ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಸೇರಿಸಲಾಗಿದೆ.
ಅಪಘಾತ ನಡೆದ ತಕ್ಷಣ ಸ್ಥಳೀಯರು ಮತ್ತು ಇತರ ವಾಹನ ಸವಾರರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು.
ವಿಷಯ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
A horrific road accident occurred in the early hours of Sunday near Lavathadka, close to Nelyadi on National Highway 75, when a Bengaluru-bound private bus rammed into a parked lorry, leaving one passenger dead and more than 18 others injured.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm