ಬ್ರೇಕಿಂಗ್ ನ್ಯೂಸ್
18-06-25 02:10 pm Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಹಿಂದು ಕಾರ್ಯಕರ್ತರ ಮನೆಗಳಿಗೆ ಮಧ್ಯರಾತ್ರಿ ಪೊಲೀಸರು ಭೇಟಿ ನೀಡಿ ಕಿರುಕುಳ ನೀಡಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ತನಿಖಾ ವಿಭಾಗದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ದ ತನಿಖೆ ಆರಂಭಿಸಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ನೀಡಿದ್ದ ದೂರು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಸಂತ್ರಸ್ತರು ಮತ್ತು ಪೊಲೀಸರನ್ನು ತನಿಖೆಗೊಳಪಡಿಸಿ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ತನಿಖಾ ವಿಭಾಗದ ಡಿಜಿಗೆ ಪತ್ರ ಬರೆದು ಸೂಚಿಸಿದೆ. ಮಾನವ ಹಕ್ಕು ಆಯೋಗದ ಅಧಿಕಾರಿಗಳು ಶಾಸಕ ಭರತ್ ಶೆಟ್ಟಿ ಅವರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ.
ಪ್ರಕರಣವನ್ನು ಗಂಭೀರ ಪರಿಗಣಿಸಿ ಸ್ಥಳ ಪರಿಶೀಲನೆ, ಪೊಲೀಸರ ದಾಖಲೆ ಪರಿಶೀಲನೆ ಮತ್ತು ಎಲ್ಲಾ ಸಂತ್ರಸ್ತರ ಹೇಳಿಕೆಗಳನ್ನು ಆಧರಿಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್‌ಹೆಚ್‌ಆರ್‌ಸಿ ಸೂಚಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಕಾನೂನುಬಾಹಿರ ನಿಗಾ ಮತ್ತು ತಡರಾತ್ರಿ ಪೊಲೀಸ್ ಭೇಟಿಗೆ ಒಳಗಾಗುತ್ತಿದ್ದಾರೆ. ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ವ್ಯಕ್ತಿಗಳ ಮನೆಗೆ ರಾತ್ರಿ 11 ಗಂಟೆ ನಂತರ ಪೊಲೀಸರು ಹೋಗುವುದು ಮಾನವ ಹಕ್ಕು ಉಲ್ಲಂಘನೆಯೆಂದು ಶಾಸಕ ಭರತ್ ಶೆಟ್ಟಿ ದೂರು ನೀಡಿದ್ದರು.
ಯಾವುದೇ ಅಪರಾಧ ಹಿನ್ನೆಲೆ, ಎಫ್‌ಐಆರ್ ಅಥವಾ ತನಿಖೆ ಇಲ್ಲದೇ ಪೊಲೀಸರು ಹಿಂದು ಸಂಘಟನೆಗಳ ನಾಯಕರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಪೊಲೀಸರು ಯಾವುದೇ ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಮನೆಗಳಿಗೆ ಹೋಗಿ ಛಾಯಾಚಿತ್ರ ತೆಗೆದು ಜಿಪಿಎಸ್ ಸ್ಥಳ ಮಾಹಿತಿ ಸಂಗ್ರಹಿಸಿ ಪ್ರಶ್ನೆ ಮಾಡಿದ್ದಾರೆ ಎಂಬ ವಿಚಾರ ಇತ್ತೀಚೆಗೆ ತೀವ್ರ ವಿವಾದಕ್ಕೆ ಒಳಗಾಗಿತ್ತು.
The National Human Rights Commission (NHRC) has launched a formal investigation into allegations that police officers in Dakshina Kannada district visited the homes of Hindu activists during late-night hours, reportedly causing distress and violating civil rights. The NHRC’s investigation wing officials have arrived in Mangaluru to initiate a detailed inquiry into the conduct of the local police.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am