ಬ್ರೇಕಿಂಗ್ ನ್ಯೂಸ್
19-06-25 07:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ (22) ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ (24) ಮೃತಪಟ್ಟಿದ್ದು ಸಹ ಪ್ರಯಾಣಿಕರಾದ ಆಶಿಶ್(23) ಮತ್ತು ವಿದೇಶಿ ಪ್ರಜೆ ಜೆರಿ (23) ಎಂಬವರು ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕಲಂ 185 ಮತ್ತು 183 ಪ್ರಕಾರ ಕೇಸು ದಾಖಲಿಸಲಾಗಿದೆ.


ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಬಿತರ ಮೇಲೆ ಪ್ರಭಾವ ಬಿದ್ದು ದುಃಖ ಅನುಭವಿಸುವಂತಾಗುತ್ತದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದಲ್ಲಿ ಮೋಟಾರು ವಾಹನ ಕಾಯಿದೆಯಡಿ ಪ್ರಕರಣ ದಾಖಲಿಸಿ ರು. 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದಕ್ಕಾಗಿ ಅತೀ ವೇಗದಿಂದ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಆದುದರಿಂದ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಸಾರ್ವಜನಿಕರಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸೂಚಿಸಿದ್ದಾರೆ.
A tragic road accident near Jeppinamogaru claimed the lives of two young men after a car, driven at high speed, lost control and crashed into a road divider. The Mangaluru Traffic South Police have confirmed that the accident occurred due to drunk driving and over-speeding by the driver.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am