ಬ್ರೇಕಿಂಗ್ ನ್ಯೂಸ್
23-06-25 09:48 pm Mangalore Correspondent ಕರಾವಳಿ
ಮಂಗಳೂರು, ಜೂನ್ 23 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅಕ್ಟೋಬರ್ 2ರಂದು ಪ್ರಕಟವಾದ "ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್" ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ.
ಸಿಸಿಆರ್ ಬಿ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಅವರು ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಸಮಿತಿಯ ತೀರ್ಪುಗಾರಿಕೆ ನಡೆಸಿದ್ದರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯ್ ಕೋಟ್ಯಾನ್ ಅವರು ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರಿಗೆ 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ' ಲಭಿಸಿದೆ. ಜೂ.25ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Senior journalist Vijay Kotian Padu of Vijay Karnataka has been selected for the prestigious ‘Brand Mangaluru’ Award, presented by the Dakshina Kannada Working Journalists’ Association. The award recognizes journalistic work that promotes harmony and showcases the cultural ethos of Mangaluru.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm