ಬ್ರೇಕಿಂಗ್ ನ್ಯೂಸ್
27-06-25 10:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 27 : ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಕೋರೆಗಳು ಬಂದ್ ಆಗಿದ್ದು ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೆಂಪುಕಲ್ಲು ಕೋರೆ ಹಾಗೂ ಲಾರಿ ಮಾಲಕರ ಒಕ್ಕೂಟದ ಸಮಾಲೋಚನಾ ಸಭೆ ಬಿ.ಸಿ.ರೋಡಿನಲ್ಲಿ ನಡೆದಿದ್ದು ಜೂನ್ 30ರಂದು ಕೆಡಿಪಿ ಸಭೆಯಲ್ಲಿ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಜುಲೈ 3ರಂದು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ.
ಜೂನ್ 30ರ ಕೆಡಿಪಿ ಸಭೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಬೇಕೆಂದು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿಭಟನೆಯಲ್ಲಿ ಕನಿಷ್ಠ ಹತ್ತು ಸಾವಿರ ಮಂದಿ ಭಾಗಿಯಾಗುವಂತೆ ಮಾಡುವ ನಿಟ್ಟಿನಲ್ಲಿ ವಲಯವಾರು ಸಭೆಗಳನ್ನು ನಡೆಸುವುದು, ಅನಿವಾರ್ಯವಾದರೆ ಉಪವಾಸ ಸತ್ಯಾಗ್ರಹ ನಡೆಸುವುದು, ಅಗತ್ಯ ಬಿದ್ದರೆ ಹೈಕೋರ್ಟ್ ಮೊರೆ ಹೋಗುವ ಬಗ್ಗೆಯೂ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೇರಳದಲ್ಲಿ ಕೆಂಪು ಕಲ್ಲು ಟನ್ ಗೆ ರಾಯಲ್ಟಿ 42 ರೂಪಾಯಿ ಇದ್ದಾಗ ಅಲ್ಲಿ ನಡೆದ ಹೋರಾಟದ ಫಲವಾಗಿ 32 ರೂಪಾಯಿಗೆ ಇಳಿದಿದೆ, ಅಲ್ಲದೆ ಜಿಪಿಎಸ್ ವ್ಯವಸ್ಥೆಯನ್ನೂ ರದ್ದುಪಡಿಸಲಾಗಿದೆ. ಆದರೆ ಕರ್ನಾಟಕದಲ್ಲಿ 97 ರೂಪಾಯಿ ಇದ್ದ ರಾಯಲ್ಟಿ ಏಕಾಏಕಿ 154 ರೂಪಾಯಿಗೆ ಏರಿಸಲಾಗಿದ್ದು, ಜಿಪಿಎಸ್ ವ್ಯವಸ್ಥೆಯಿಂದಲೂ ಸಂಕಷ್ಟ ಎದುರಾಗಿದೆ. ಉಸ್ತುವಾರಿ ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನ್ಯಾಯ ಸಿಗದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ ಕೆಂಪುಕಲ್ಲು ವಲಯದ ಸಾಮರ್ಥ್ಯ ತೋರ್ಪಡಿಸುವುದು ಅನಿವಾರ್ಯವಾಗಲಿದೆ. ಕೇರಳದಲ್ಲಿ ಕೆಂಪುಕಲ್ಲು ಪಾಯದ ಸಮಸ್ಯೆ ನಿವಾರಣೆಗಾಗಿ ಉಪವಾಸ ಸತ್ಯಾಗ್ರಹ ನಡೆದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಸಂಘ ಎಲ್ಲಾ ರೀತಿಯ ಸಹಕಾರ ನೀಡಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಸಮಸ್ಯೆ ಬಂದಾಗ ಕೇರಳದಿಂದ ಯಾವುದೇ ಸಹಕಾರ ಸಿಗುತ್ತಿಲ್ಲ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆಂಪುಕಲ್ಲು ಕೋರೆ ಹಾಗೂ ಲಾರಿ ಮಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶ್ ಆಚಾರ್ಯ ತಿಳಿಸಿದರು.
ಜಿಲ್ಲಾ ಕೋಶಾಧಿಕಾರಿ ರಾಮ ಮುಗರೋಡಿ, ಮುಡಿಪು ವಲಯಾಧ್ಯಕ್ಷ ವಿಶ್ವನಾಥ್ ರೈ, ಕೈಕಂಬ ವಲಯಾಧ್ಯಕ್ಷ ಧೀರಜ್ ಅಮೀನ್, ಮೂಡಬಿದ್ರೆ ವಲಯಾಧ್ಯಕ್ಷ
ಪ್ರವೀಣ್ ಡಿಸೋಜ, ಲಾರಿ ಮಾಲಕರ ಸಂಘದ ಮೂಡಬಿದ್ರೆ ವಲಯಾಧ್ಯಕ್ಷ ರವಿಶಂಕರ್ ಮಿಜಾರ್, ವಿಟ್ಲ ವಲಯಾಧ್ಯಕ್ಷ ಸುಧೀರ್ ಕೋಟ್ಯಾನ್, ಬಂಟ್ವಾಳ ವಲಯಾಧ್ಯಕ್ಷ ಮೋಹನ್ ಶೆಟ್ಟಿ, ಎಕ್ಕಾರು ವಲಯಾಧ್ಯಕ್ಷ ಗಣೇಶ್ ಶೆಟ್ಟಿ, ಪುತ್ತೂರು ವಲಯಾಧ್ಯಕ್ಷ ಹೇಮಚಂದ್ರ, ಸುಳ್ಯ ವಲಯಾಧ್ಯಕ್ಷ ಪ್ರಕಾಶ್ ಅಡ್ಕಾರ್, ಕಿನ್ನಿಗೋಳಿ ವಲಯಾಧ್ಯಕ್ಷ ಗೋಪಾಲ ಮೊದಲಾದವರು ಉಪಸ್ಥಿತರಿದ್ದರು.
Following strict enforcement actions by the police, red stone quarries in Dakshina Kannada district have come to a standstill. In response, the Dakshina Kannada District Red Stone Quarry and Lorry Owners’ Association held a key consultation meeting at B.C. Road to discuss the ongoing crisis.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm