ಬ್ರೇಕಿಂಗ್ ನ್ಯೂಸ್
30-06-25 03:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಜೋರಾದ ಗಾಳಿಗೆ ಏಕಾಏಕಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಹಂಚು ಜಾರುವುದನ್ನು ತಿಳಿದು ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತ ತಪ್ಪಿದೆ.
ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ 12.30ರ ವೇಳೆಗೆ ಘಟನೆಯಾಗಿದ್ದು ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿದ್ದಂತೆ ಮಕ್ಕಳು ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ತರಗತಿ ಕೊಠಡಿಯಿದ್ದ ಆ ಭಾಗದ ಹಂಚು ಪೂರ್ತಿಯಾಗಿ ಕುಸಿದು ಕೆಳಕ್ಕೆ ಬಿದ್ದಿದೆ.
ಘಟನೆಯಲ್ಲಿ ಶೋನಿತ್ ಎಂಬ ಯುಕೆಜಿ ವಿದ್ಯಾರ್ಥಿಗೆ ತಲೆ ಮತ್ತು ಮುಖಕ್ಕೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಶಾಲೆಯನ್ನು ದುರಸ್ತಿ ಪಡಿಸಲಾಗಿತ್ತು. ಶಾಲೆಯಲ್ಲಿ 21 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಊರವರೇ ಸೇರಿ ಶಾಲೆ ನಡೆಸುತ್ತಿದ್ದೇವೆ
ಹಿಂದೆ ಇದು ಅನುದಾನಿತ ಶಾಲೆಯಾಗಿದ್ದು ಆನಂತರ ಇಲ್ಲಿನ ಮುಖ್ಯ ಶಿಕ್ಷಕಿ ನಿವೃತ್ತಿಯಾದ ಬಳಿಕ ಮತ್ತೆ ಸರ್ಕಾರದಿಂದ ನೇಮಕಾತಿ ಆಗಿರಲಿಲ್ಲ. ಮುಖ್ಯಪ್ರಾಣ ದೇವರ ಹೆಸರಲ್ಲಿದ್ದ ಶಾಲೆ ನಿಲುಗಡೆ ಆಗುತ್ತದೆ ಎನ್ನುವಾಗ ಊರವರು ಸೇರಿ ದಾನಿಗಳ ಸಹಕಾರದಿಂದ ಶಾಲೆಯನ್ನು ಉಳಿಸಿದ್ದೆವು. ಈಗ ಮೂರು ವರ್ಷದಿಂದ ಎಲ್ಕೆಜಿ, ಯುಕೆಜಿ ಮತ್ತು ನರ್ಸರಿ ತರಗತಿಯನ್ನು ಖಾಸಗಿಯಾಗಿಯೇ ನಡೆಸುತ್ತಿದ್ದೇವೆ. ಸರ್ಕಾರದ ಯಾವುದೇ ಅನುದಾನ ಇಲ್ಲ. ಊರಿಗೊಂದು ಶಾಲೆ ಬೇಕೆಂಬ ಕಾಳಜಿಯಿಂದ ಮಾಡುತ್ತಿದ್ದೇವೆ. ಕಳೆದ ವರ್ಷ ನಾವು ಸ್ಥಳೀಯರು ಸೇರಿ ಶ್ರಮದಾನದ ಮೂಲಕ ಶಾಲೆ ದುರಸ್ತಿ ಮಾಡಿದ್ದೆವು. ಹಂಚು, ಪಕ್ಕಾಸು ಎಲ್ಲ ಬದಲಾಯಿಸಿದ್ದೆವು. ಈಗ ಸಣ್ಣ ಗಾಳಿಗೆ ಕುಸಿದು ಬಿದ್ದಿದೆ. ಹೇಗೆ ಬಿದ್ದಿದೆ ಎನ್ನುವುದು ಗೊತ್ತಿಲ್ಲ. ಆದರೆ ದೇವರು ಯಾವುದೇ ಅಪಾಯ ಆಗದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 21 ಸಣ್ಣ ಮಕ್ಕಳಿದ್ದರೂ ಒಂದು ಮಗು ಬಿಟ್ಟರೆ ಯಾರಿಗೂ ತೊಂದರೆ ಆಗಿಲ್ಲ ಎಂದು ಸ್ಥಳೀಯರಾದ ವಿಜಯ ಕುಮಾರ್ ಮತ್ತು ಬಾಲು ಪೇಜಾವರ 'ಹೆಡ್ ಲೈನ್ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.
A major tragedy was narrowly avoided in Pejavara village on the outskirts of Mangaluru when the roof of a classroom collapsed during school hours due to strong winds. Fortunately, most students had rushed out moments before the collapse, preventing a serious disaster.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm