ಬ್ರೇಕಿಂಗ್ ನ್ಯೂಸ್
30-06-25 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 30 : ಹಾಸನ ಜಿಲ್ಲೆಯಲ್ಲೇ ಯಾಕಿಷ್ಟು ಹೃದಯಘಾತ ಆಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಹಾಸನದಲ್ಲಿ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆರೋಗ್ಯ ಇಲಾಖೆಯಿಂದ ವರದಿ ಕೇಳಿದ್ದೇವೆ. ವರದಿ ಮಾಹಿತಿ ಆಧರಿಸಿ ಪರಿಶೀಲನೆ ಮಾಡುತ್ತೇವೆ. ಸಾವಿನ ಹಿಂದಿನ ಸತ್ಯಾಸತ್ಯತೆ ಏನು ಅನ್ನೋದು ಅಂಕಿ ಅಂಶಗಳ ಆಧಾರದ ವರದಿ ಮೂಲಕ ತಿಳಿಯುತ್ತದೆ. ಈಗಿನ ಜೀವನ ಶೈಲಿ, ಆಹಾರ ಪದ್ಧತಿ, ಮೊಬೈಲ್ ಮತ್ತು ಡಿಜಿಟಲ್ ವ್ಯಸನದಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ.
ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೊತ್ತಡ, ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈಗ ಎಲ್ಲ ಕಡೆ ಮಾಲಿನ್ಯವಿದೆ. ವಾಯು, ಆಹಾರ, ನೀರಿನಲ್ಲಿ ಮಾಲಿನ್ಯ ಇದೆ. ದೆಹಲಿಯಲ್ಲಿ ಗಾಳಿಯನ್ನ ಉಸಿರಾಟ ಮಾಡಿದ್ರೆ ದುಷ್ಪರಿಣಾಮವಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ಈಗ ನಮ್ಮಲ್ಲೂ ಅದೇ ರೀತಿಯ ವಾತಾವರಣ ಆಗಿದೆ. ಇದಕ್ಕೇನು ಕಾರಣ ಅಂತ ಅಧ್ಯಯನ ಆಗಬೇಕು. ಜೊತೆಗೆ, ನಮ್ಮ ಜೀವನ ಶೈಲಿ ನೋಡಿಕೊಳ್ಳೋದು, ಆರೋಗ್ಯದ ಕಾಳಜಿ ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಕೋವಿಡ್ ಬಳಿಕ ಹೃದಯಾಘಾತ ಏರಿಕೆ ಕುರಿತಾಗಿ ಅಧ್ಯಯನಕ್ಕೆ ಸಮಿತಿ ನೇಮಕ ಮಾಡಲಾಗಿತ್ತು. ಲಾಂಗ್ ಕೋವಿಡ್ ನಿಂದ ಏನಾದರೂ ಸಮಸ್ಯೆಗಳು ಇದೆಯಾ ಎಂದು ಮುಖ್ಯಮಂತ್ರಿಗಳು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ವಿಶ್ವ ಮಟ್ಟದ ಅಧ್ಯಯನದ ಅವಶ್ಯಕತೆಯಿದೆ. ಲಾಂಗ್ ಕೋವಿಡ್ ದುಷ್ಪರಿಣಾಮ ಏನು ಅನ್ನೋದರ ಅಧ್ಯಯನ ನಡೆಯಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Health Minister Dinesh Gundu Rao has directed health department officials to submit a detailed report regarding the alarming rise in heart attack cases in Hassan district, especially among the youth.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm