ಬ್ರೇಕಿಂಗ್ ನ್ಯೂಸ್
04-07-25 10:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 4 : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ಬಂದು ನೀಡಿರುವ ದೂರು ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಬಗ್ಗೆ ದ.ಕ. ಎಸ್ಪಿ ಡಾ.ಅರುಣ್ ಪ್ರಕಟಣೆ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವ ಬೆದರಿಕೆ ಒಡ್ಡಿ, ಸದ್ರಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ಧವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.
ದೂರಿನ ಬಗ್ಗೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು. ಸದ್ರಿ ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.
A First Information Report (FIR) has been registered at the Dharmasthala Police Station based on a chilling complaint submitted by an individual, alleging a series of criminal activities including the secret disposal of multiple dead bodies over the years in Dharmasthala village. Dakshina Kannada Superintendent of Police, Dr. Arun, confirmed the development in an official press release. According to the complaint, the individual alleges that numerous crimes, including murders, have taken place in the area over a long period.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm